ಮೊದಲೇ ಸೆಟ್ಲ್‌ಮೆಂಟ್ ಆಗಿದೆ, ಡಿಕೆಶಿ ಮುಂದಿನ ಸಿಎಂ, ಸಿದ್ದರಾಮಯ್ಯ ನಿವೃತ್ತಿ?

ಡಿಕೆ ಶಿವಕುಮಾರ್‌ಗೆ ಸಿಎಂ ಪಟ್ಟ ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ, ಮೊಯ್ಲಿ, ರಾಜ್ಯ ಬಜೆಟ್ ಅಧಿವೇಶನ ಆರಂಭ, ಮಾ.7ಕ್ಕೆ ಬಜೆಟ್ ಮಂಡನೆ, ಸಿಎಂ ಸಿದ್ದರಾಮಯ್ಯ ಮುಂದೆ ಗುತ್ತಿಗೆದಾರರ 3 ಬೇಡಿಕೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

Share this Video
  • FB
  • Linkdin
  • Whatsapp

ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಕೋಟಿ ಪ್ರಯತ್ನ ಪಟ್ಟರೂ ತಪ್ಪಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಸ್ಪಷ್ಟವಾಗಿ 2 ಮಾತುಗಳನ್ನಾಡಿದ್ದಾರೆ. ಡಿಕೆ ಶಿವಕುಮಾರ್ ಶೀಘ್ರದಲ್ಲೇ ಮುಖ್ಯಮಂತ್ರಿಯಾಗುತ್ತಾರೆ ಎಂದಿದ್ದಾರೆ. ಇಷ್ಟೇ ಅಲ್ಲ ಇದು ತೀರ್ಮಾನ ಆಗಿರುವ ವಿಚಾರ ಎಂದಿದ್ದಾರೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾದರೆ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಪಡೆಯಲಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ.

Related Video