Asianet Suvarna News Asianet Suvarna News

'6 ತಿಂಗಳಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ': BJP ಜೊತೆ ಶಾಮೀಲಾದ ಪೊಲೀಸರಿಗೆ ಸಿದ್ದರಾಮಯ್ಯ ಎಚ್ಚರಿಕೆ

Bharat Jodo Yatra Karnataka: ಇನ್ನು 6 ತಿಂಗಳಲ್ಲಿ ಸರ್ಕಾರ ಬದಲಾಗುತ್ತದೆ, ಕಾಂಗ್ರೆಸ್‌ ವಾಪಾಸು ಅಧಿಕಾರಕ್ಕೆ ಬರುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ

ಬೆಂಗಳೂರು (ಸೆ. 30):  ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್‌ ಜೋಡೋ (Bharat Jodo Yatra)  ಹೆಸರಿನಲ್ಲಿ ಪಾದಯಾತ್ರೆ ಕೈಗೊಂಡಿರುವ ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ಅವರು 20 ದಿನಗಳ ಕಾಲ ಕೇರಳದಲ್ಲಿ ಯಾತ್ರೆ ನಡೆಸಿ  ಕರ್ನಾಟಕ (Karnataka) ಪ್ರವೇಶಿಸಿದ್ದಾರೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ರಾಜ್ಯ ನಾಯಕರು ಅದ್ಧೂರಿ ಸ್ವಾಗತ ಕೋರಿದ್ದಾರೆ. ಈ ವೇಳೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಇನ್ನು 6 ತಿಂಗಳಲ್ಲಿ ಸರ್ಕಾರ ಬದಲಾಗುತ್ತದೆ, ಕಾಂಗ್ರೆಸ್‌ ವಾಪಾಸು ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದ್ದಾರೆ. ಇದೇ ವೇಳೆ BJP ಜೊತೆ ಶಾಮೀಲಾದ ಪೊಲೀಸರಿಗೆ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಈ ಕುರಿತ ಕಂಪ್ಲೀಟ್‌ ರಿಪೋರ್ಟ್‌ ಇಲ್ಲಿದೆ 

ತಲೆತಿರುಕನಂತೆ ಮಾತಾಡೋದು ಸಿದ್ದರಾಮಯ್ಯ ಸ್ವಭಾವ: ಬಿ.ಎಸ್‌.ಯಡಿಯೂರಪ್ಪ ಟೀಕೆ