Assembly Election: ಮಾಜಿ ಸಿಎಂಗೆ ಕ್ಷೇತ್ರ ಸಂಕಷ್ಟ, ಸಿದ್ದು ಚಿತ್ತ ಯಾವ ಕ್ಷೇತ್ರದತ್ತ?

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ಮಾಡದಂತೆ ಹೈಕಮಾಂಡ್‌ ಸೂಚನೆ ನೀಡಿದೆ. ಈಗ ಸಿದ್ಯಾದರಾಮಯ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎನ್ನುವುದು ಕುತೂಹಲಕಾರಿಯಾಗಿದೆ.

Share this Video
  • FB
  • Linkdin
  • Whatsapp

ಬೆಂಗಳೂರು (ಮಾ.19): ರಾಜ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡದಂತೆ ಹೈಕಮಾಂಡ್‌ ಸೂಚನೆ ನೀಡಿದೆ. ಹಾಗಾದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎನ್ನುವುದು ಕುತೂಹಲಕಾರಿಯಾಗಿದೆ.

ಇನ್ನು ಅವರ ಮುಂದೆ ಬಾದಾಮಿ, ವರುಣಾ ವಿಧಾನಸಭಾ ಕ್ಷೇತ್ರಗಳು ಕೂಡ ಆಯ್ಕೆಗೆ ಉಳಿದಿದ್ದು ಎಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬುದು ಯಕ್ಷ ಪ್ರಶ್ನೆಯಾಗಿ ಉಳಿದಿದೆ. ಆದರೆ, ಸಿದ್ದರಾಮಯ್ಯ ಅವರ ಹಲವು ಹಿಂಬಾಲಕರು ತಮ್ಮ ಕ್ಷೇತ್ರವನ್ನು ಬಿಟ್ಟುಕೊಡುವುದಾಗಿ ರಾಯಚೂರು ಹಾಗೂ ಬಾಗಲಕೋಟೆ ಜಲ್ಲೆಯಲ್ಲಿ ಕೆಲವರು ಮುಂದೆ ಬಂದಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಯಾವುದೇ ತೀರ್ಮಾನವನ್ನು ಕೈಗೊಂಡಿಲ್ಲ. ಇನ್ನು ಬಾದಾಮಿಯಿಂದಲೇ ಮತ್ತೊಮ್ಮೆ ಸ್ಪರ್ಧೆ ಮಾಡುವಂತೆ ಹೆಚ್ಚಿನ ಒತ್ತಡ ಕೇಳಿಬಂದಿರುವ ಹಿನ್ನೆಲೆಯಲ್ಲಿ ಆಯ್ಕೆಯನ್ನೂ ಅವರಿಗೆ ಬಿಡಲಾಗಿದೆ. 

Related Video