Asianet Suvarna News Asianet Suvarna News

ಪಾಲಿಕೆ ಎಲೆಕ್ಷನ್‌ ಪ್ರಚಾರಕ್ಕೆ ಸಿದ್ದರಾಮಯ್ಯ ಗೈರು: ಕಾರಣ ಕೊಟ್ಟ ನಳಿನ್ ಕುಮಾರ್ ಕಟೀಲ್

ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪರೋಕ್ಷವಾಗಿ ಸಿದ್ದರಾಮಯ್ಯನವರನ್ನ ಹೊಗಳಿದಂತೆ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಟಾಂಗ್ ಕೊಟ್ಟಿದ್ದಾರೆ.

ಬೆಂಗಳೂರು, (ಸೆ.06): 3 ಮಹಾನಗರ ಪಾಲಿಕೆಗಳ ಚುನಾವಣೆಯ ಸಂಪೂರ್ಣ ಫಲಿತಾಂಶ ಇಂದು (ಸೆ.06) ಹೊರಬಿದ್ದಿದೆ. ಬೆಳಗಾವಿಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕರೇ ಕಲಬುರಗಿ ಹಾಗೂ ಹುಬ್ಬಳ್ಳಿ-ಧಾರವಾಡ ಪಾಲಿಕೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಸಿಗದೇ ಅತಂತ್ರವಾಗಿದೆ.

ಮಹಾನಗರ ಪಾಲಿಕೆ ಎಲೆಕ್ಷನ್ ರಿಸಲ್ಟ್: ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್

1984ರಿಂದಲೂ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರದಲ್ಲಿದ್ದ ಎಂಇಎಸ್ ಪರಾಭವಗೊಳಿಸಿ ಮೊದಲ ಬಾರಿ ಬಿಜೆಪಿ ಅಧಿಕಾರ ಹಿಡಿದಿದೆ. ಒಟ್ಟು 58 ವಾರ್ಡ್‌ಗಳಲ್ಲಿ 35 ಕ್ಷೇತ್ರದಲ್ಲಿ ಬಿಜೆಪಿ ಜಯ ಸಾಧಿಸಿದೆ. ಇನ್ನು ಈ ಫಲಿತಾಂಶಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪರೋಕ್ಷವಾಗಿ ಸಿದ್ದರಾಮಯ್ಯನವರನ್ನ ಹೊಗಳಿದಂತೆ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಟಾಂಗ್ ಕೊಟ್ಟಿದ್ದಾರೆ.

Video Top Stories