Asianet Suvarna News Asianet Suvarna News

ವಿಜಯೇಂದ್ರಗೆ ಪರಿಷತ್ ಟಿಕೆಟ್ ನೀಡದಿರಲು ಹೈಕಮಾಂಡ್ ನಿರ್ಧಾರ

ರಾಜ್ಯಸಭೆ ಮತ್ತು ವಿಧಾನ ಪರಿಷತ್‌ ಚುನಾವಣೆಯ ಬಿಜೆಪಿ ಟಿಕೆಟ್‌ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವದೆಹಲಿಯಲ್ಲಿ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. 

ಬೆಂಗಳೂರು (ಮೇ. 23): ರಾಜ್ಯಸಭೆ ಮತ್ತು ವಿಧಾನ ಪರಿಷತ್‌ ಚುನಾವಣೆಯ ಬಿಜೆಪಿ ಟಿಕೆಟ್‌ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ನವದೆಹಲಿಯಲ್ಲಿ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಅವರಿಗೆ ವಿಧಾನ ಪರಿಷತ್‌ ಟಿಕೆಟ್‌ ನೀಡಲು ಶಿಫಾರಸು ಮಾಡಿದ್ದಾರೆ ಎನ್ನಲಾಗಿತ್ತು.

ಇದೀಗ ವಿಜಯೇಂದ್ರಗೆ ಪರಿಷತ್ ಟಿಕೆಟ್‌ ನೀಡದಿರಲು ಹೈಕಮಾಂಡ್ ನಿರ್ಧರಿಸಿದೆಯಂತೆ. ವಿಜಯೇಂದ್ರಗೆ ವಿಧಾನಸಭೆ ಚುನಾವಣೆ ಗೆಲ್ಲುವ ಶಕ್ತಿ ಇದೆ. ಹಾಗಾಗಿ ಅವರನ್ನು ವಿಧಾನ ಸಭೆ ಚುನಾವಣೆಗಿಳಿಸುವ ಲೆಕ್ಕಾಚಾರ ಮಾಡಲಾಗಿದೆ. ಇಂದು ಸಂಜೆಯೊಳಗೆ ಬಿಜೆಪಿ ಪಟ್ಟಿ ಹೊರಬೀಳಲಿದೆ.