Asianet Suvarna News Asianet Suvarna News

ಜೆಡಿಎಸ್‌ನಲ್ಲಿ ಟಿಕೆಟ್‌ಗಾಗಿ ಬಿಗ್ ಫೈಟ್, ದೊಡ್ಡಣ್ಣ ಅಳಿಯ ವೀರೇಂದ್ರಗೆ ಟಿಕೆಟ್..?

ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಜೆಡಿಎಸ್‌ ತನಗೆ ಲಭಿಸುವ ಒಂದು ಸ್ಥಾನಕ್ಕೆ ಚಿತ್ರನಟ ದೊಡ್ಡಣ್ಣ ಅವರ ಅಳಿಯ ಹಾಗೂ ಪಕ್ಷದ ಮುಖಂಡ ಕೆ.ಸಿ.ವೀರೇಂದ್ರ (ಪಪ್ಪಿ) ಅವರಿಗೆ ಟಿಕೆಟ್‌ ನೀಡುವ ಸಾಧ್ಯತೆಯಿದೆ.

ಬೆಂಗಳೂರು (ಮೇ. 23): ವಿಧಾನಸಭೆಯಿಂದ ವಿಧಾನಪರಿಷತ್ತಿಗೆ (Council Election) ನಡೆಯುವ ಚುನಾವಣೆಯಲ್ಲಿ ಜೆಡಿಎಸ್‌ (JDS) ತನಗೆ ಲಭಿಸುವ ಒಂದು ಸ್ಥಾನಕ್ಕೆ ಚಿತ್ರನಟ ದೊಡ್ಡಣ್ಣ ಅವರ ಅಳಿಯ ಹಾಗೂ ಪಕ್ಷದ ಮುಖಂಡ ಕೆ.ಸಿ.ವೀರೇಂದ್ರ (ಪಪ್ಪಿ) ಅವರಿಗೆ ಟಿಕೆಟ್‌ ನೀಡುವ ಸಾಧ್ಯತೆಯಿದೆ.

ವಿಜಯೇಂದ್ರಗೆ ಪರಿಷತ್ ಟಿಕೆಟ್ ನೀಡದಿರಲು ಹೈಕಮಾಂಡ್ ನಿರ್ಧಾರ

ವಿಧಾನಸಭೆಯಿಂದ ವಿಧಾನಪರಿಷತ್ತಿನ ಏಳು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದರೂ ಸಂಖ್ಯಾಬಲದ ಆಧಾರದ ಮೇಲೆ ಜೆಡಿಎಸ್‌ಗೆ ಒಂದು ಸ್ಥಾನ ಮಾತ್ರ ಲಭ್ಯವಾಗಲಿದೆ. ಹಾಲಿ ಸದಸ್ಯ ರಮೇಶ್‌ಗೌಡ ಅವರ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದೆ. ಅವರೂ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. ಅಲ್ಲದೆ, ಪಕ್ಷದ ವಕ್ತಾರ ಟಿ.ಎ.ಶರವಣ, ರಾಜ್ಯಸಭೆಯ ಮಾಜಿ ಸದಸ್ಯ ಕುಪೇಂದ್ರ ರೆಡ್ಡಿ, ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಪ್ರಕಾಶ್‌ ಮತ್ತಿತರರು ಟಿಕೆಟ್‌ಗಾಗಿ ಪ್ರಯತ್ನ ಮಾಡುತ್ತಿದ್ದಾರೆ. ಇದೀಗ ಜೆಡಿಎಸ್‌ ವರಿಷ್ಠರು ವೀರೇಂದ್ರ ಅವರನ್ನು ಕಣಕ್ಕಿಳಿಸುವ ಬಗ್ಗೆ ಒಲವು ತೋರಿದ್ದಾರೆ ಎನ್ನಲಾಗುತ್ತಿದೆ.