ಬಿಜೆಪಿಯಲ್ಲಿ ಭಾರೀ ಬದಲಾವಣೆ; ಕೇಸರಿ ಯುವಪಡೆಗೆ ಕನ್ನಡಿಗನ ಹೊಣೆ!

ರಾಷ್ಟ್ರ ಬಿಜೆಪಿಯಲ್ಲಿ ಭಾರೀ ಬದಲಾವಣೆ ಕಾಣಿಸುತ್ತಿದೆ. ಕರ್ನಾಟಕದ ಬಿಜೆಪಿ ಪಾಲಿಗೆ ಈ ಬದಲಾವಣೆ ಭಾರೀ ಸಂತಸವನ್ನು ತಂದಿದೆ. ಪಕ್ಷದ ಸಂಘಟನೆಯಲ್ಲಿ ಮುಂದಿನ ತಲೆಮಾರಿನವರಿಗೆ ಮತ್ತು ಯುವಕರಿಗೆ ಆದ್ಯತೆ ನೀಡಬೇಕು ಎಂಬ ಉದ್ದೇಶದಿಂದ ಹೊಸಬರಿಗೆ ಅವಕಾಶ ಕಲ್ಪಿಸಲಾಗಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಸೆ. 28): ರಾಷ್ಟ್ರ ಬಿಜೆಪಿಯಲ್ಲಿ ಭಾರೀ ಬದಲಾವಣೆ ಕಾಣಿಸುತ್ತಿದೆ. ಕರ್ನಾಟಕದ ಬಿಜೆಪಿ ಪಾಲಿಗೆ ಈ ಬದಲಾವಣೆ ಭಾರೀ ಸಂತಸವನ್ನು ತಂದಿದೆ. ಪಕ್ಷದ ಸಂಘಟನೆಯಲ್ಲಿ ಮುಂದಿನ ತಲೆಮಾರಿನವರಿಗೆ ಮತ್ತು ಯುವಕರಿಗೆ ಆದ್ಯತೆ ನೀಡಬೇಕು ಎಂಬ ಉದ್ದೇಶದಿಂದ ಹೊಸಬರಿಗೆ ಅವಕಾಶ ಕಲ್ಪಿಸಲಾಗಿದೆ. 

ಸಿಎಂ ಬಿಎಸ್‌ವೈ ಮತ್ತೆ ದೆಹಲಿಗೆ: ಸಂಪುಟ ವಿಸರಣೆಯೋ.? ಪುನಾರಚನೆಯೋ.?

ಪಕ್ಷದ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿ ಸ್ಥಾನ ಎಂದು ಪರಿಗಣಿಸಿರುವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನಾಗಿ ರಾಜ್ಯದ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರನ್ನು ನೇಮಿಸಲಾಗಿದೆ. ರಾಜ್ಯಸಭಾ ಸದಸ್ಯ ರಾಜೀವ್‌ ಚಂದ್ರಶೇಖರ್‌ ಅವರಿಗೆ ರಾಷ್ಟ್ರೀಯ ವಕ್ತಾರ ಹುದ್ದೆಯನ್ನು ನೀಡಲಾಗಿದೆ. ಇನ್ನು ಮೊದಲ ಬಾರಿಗೆ ಸಂಸತ್ತಿನ ಮೆಟ್ಟಲು ಏರಿರುವ ಯುವ ಸಂಸದ ತೇಜಸ್ವಿ ಸೂರ್ಯ ಅವರನ್ನು ರಾಷ್ಟ್ರೀಯ ಯುವಮೋರ್ಚಾದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

Related Video