Asianet Suvarna News Asianet Suvarna News

ಸರ್ಕಾರ ನಮ್ಮ ರಕ್ಷಣೆಗೆ ಬರುವುದಿಲ್ಲ,ನಾವೇ ನಮ್ಮ ರಕ್ಷಣೆ ಮಾಡಿಕೊಳ್ಳಬೇಕು: ಸಿ.ಟಿ. ರವಿ

ಸರ್ಕಾರ ನಮ್ಮ ರಕ್ಷಣೆಗೆ ಬರುವುದಿಲ್ಲ. ನಾವೇ ನಮ್ಮ ರಕ್ಷಣೆ ಮಾಡಿಕೊಳ್ಳಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ. 

First Published Jun 17, 2023, 12:47 PM IST | Last Updated Jun 17, 2023, 12:47 PM IST

ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿಯನ್ನು ಕಾಂಗ್ರೆಸ್‌ ರದ್ದು ಪಡಿಸಲು ಮುಂದಾಗಿದೆ. ಇದಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸರ್ಕಾರ ನಮ್ಮ ರಕ್ಷಣೆಗೆ ಬರುವುದಿಲ್ಲ. ನಾವೇ ನಮ್ಮ ರಕ್ಷಣೆ ಮಾಡಿಕೊಳ್ಳಬೇಕು. ನಮ್ಮ ಧರ್ಮ, ಸಮುದಾಯ ರಕ್ಷಣೆಗೆ ಸ್ವಂತ ಕ್ರಮವನ್ನು ಕೈಗೊಳ್ಳಬೇಕಾಗಿದೆ. ಈ ಸರ್ಕಾರ ಕಳ್ಳ- ಕಾಕರ, ಮತಾಂತರಿಗಳ ಪರವಾಗಿದೆ.ಬಲಾತ್ಕಾರದ ಮತಾಂತರದ ಪರವಾಗಿ ಕಾಂಗ್ರೆಸ್ ಇದೆಯಾ? ಆಸೆ, ಆಮಿಷ, ಬಲತ್ಕಾರ, ಮೋಸದ ಮತಾಂತರಕ್ಕೆ ನಿಷೇಧ ಇದೆ? ಬಲವಂತದ ಮತಾಂತರ ಬಗ್ಗೆ ಕಾಂಗ್ರೆಸ್ ಪಕ್ಷದ ನಿಲುವೇನು? ಎಂದು ಸಿ.ಟಿ.ರವಿ ಪ್ರಶ್ನಿಸಿದ್ದಾರೆ.

ಇದನ್ನೂ ವೀಕ್ಷಿಸಿ: ಗೃಹಲಕ್ಷ್ಮೀ, ಗೃಹಜ್ಯೋತಿ ಗ್ಯಾರಂಟಿಗಳಿಗೆ ಮುಹೂರ್ತ್ ಫಿಕ್ಸ್ !: ಸೋಮವಾರದಿಂದ 'ಶಕ್ತಿ'ಸ್ಮಾರ್ಟ್‌ ಕಾರ್ಡ್‌ಗೆ ಸರ್ಜಿ ಸ್ವೀಕಾರ