Asianet Suvarna News Asianet Suvarna News

ಗ್ಯಾರಂಟಿ ಯೋಜನೆ ಕುರಿತು ಊಹಾಪೋಹಗಳಿಗೆ ಅವಕಾಶ ನೀಡಬೇಡಿ:ಡಿಸಿಎಂ ಡಿಕೆ ಶಿವಕುಮಾರ್‌

 ಐದು ಗ್ಯಾರೆಂಟಿಗಳ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ  ತೀರ್ಮಾನಿಸಿದ್ದು ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್‌ ಮಾತನಾಡಿ 5 ಗ್ಯಾರಂಟಿ ಜಾರಿ ಮಾಡೋದು ಖಚಿತ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ ಎಂದು ಹೇಳಿದರು.

 ಐದು ಗ್ಯಾರೆಂಟಿಗಳ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ  ತೀರ್ಮಾನಿಸಿದ್ದು ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್‌ ಮಾತನಾಡಿ 5 ಗ್ಯಾರಂಟಿ ಜಾರಿ ಮಾಡೋದು ಖಚಿತ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ ಎಂದು ಹೇಳಿದರು.  ಮಾಧ್ಯಮದವರ ಜತೆ ಮಾತನಾಡಿದ ಅವರು ಗ್ಯಾರಂಟಿ ಯೋಜನೆ ಕುರಿತು ಯಾರು ಕೂಡ ಊಹಾಪೋಹಗಳಿಗೆ ಅವಕಾಶ ನೀಡಬೇಡಿ. ಇಂದು ನಡೆದ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಸುದೀರ್ಘ ಚರ್ಚೆ ಮಾಡಿದ್ದೇವೆ. ಅಧಿಕಾರಿಗಳು ಸಚಿವರುಗಳಿಗೆ ಮಾಹಿತಿ ನೀಡಿ, ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಶುಕ್ರವಾರ  ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ನಾವು ಜನರಿಗೆ ಕೊಟ್ಟಿರುವ ಮಾತಿನ ಬಗ್ಗೆ ಅರಿವಿದೆ. ಈ ಯೋಜನೆಗಳನ್ನು ಕ್ರಮಬದ್ಧವಾಗಿ ಅನುಷ್ಠಾನಕ್ಕೆ ತರುತ್ತೇವೆ ಎಂದು ಹೇಳಿದರು.