Asianet Suvarna News Asianet Suvarna News

ಪಂಚಮಸಾಲಿ ಮೀಸಲಾತಿ: ಸಂಪುಟ ಸಭೆಯಲ್ಲಿ ಇಂದು ತೀರ್ಮಾನ..!

 ಇಂದು ಸಂಜೆ 4 ಗಂಟೆಗೆ  ಸಚಿವ ಸಂಪುಟ ಸಭೆ ನಡೆಯಲಿದ್ದು , ಸಂಪುಟ ಸಭೆಯಲ್ಲಿ ಪಂಚಮಸಾಲಿ ಮೀಸಲಾತಿ ಕುರಿತು ಚರ್ಚೆ ಮಾಡಲಾಗುತ್ತದೆ.

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಳ ಮಾಡಲು ಜಾರಿಗೆ ತಂದಿರುವ ಕರ್ನಾಟಕ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಾಯ್ದೆ 2022 ನ್ನು ಸಂವಿಧಾನದ 9 ನೇ ಶೆಡ್ಯೂಲ್ ನಲ್ಲಿ ಸೇರ್ಪಡೆಗೆ ಕೇಂದ್ರಕ್ಕೆ ರಾಜ್ಯ ಸರ್ಕಾರವು ಪ್ರಸ್ತಾವನೆ ಸಲ್ಲಿಸಿದೆ. ವಿಪಕ್ಷ ನಾಯಕರಿಂದ  ಟೀಕೆಗಳು, ಆಕ್ರೋಶ ವ್ಯಕ್ತವಾದ ಬೆನ್ನಲ್ಲೆ ರಾಜ್ಯ ಬಿಜೆಪಿ ಎಚ್ಚೆತ್ತುಕೊಂಡಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಸಮುದಾಯಕ್ಕೆ ಮೀಸಲಾತಿ ಹೆಚ್ಚಳಕ್ಕೆ ಅಂತಿಮ ರೂಪ ದೊರೆಯುತ್ತಿದೆ. ಇಂದು ಸಂಜೆ 4 ಗಂಟೆಗೆ  ಸಚಿವ ಸಂಪುಟ ಸಭೆ ನಡೆಯಲಿದ್ದು , ಸಂಪುಟ ಸಭೆಯಲ್ಲಿ ಪಂಚಮಸಾಲಿ ಮೀಸಲಾತಿ ಕುರಿತು ಚರ್ಚೆ ಮಾಡಲಾಗುತ್ತದೆ. ಇನ್ನು  ಕಾಯ್ದೆ 2022 ಅನ್ವಯ ರಾಜ್ಯದಲ್ಲಿ ಪರಿಶಿಷ್ಟ ಜಾತಿ (SC) ಯವರಿಗೆ ಮೀಸಲಾತಿ ಪ್ರಮಾಣ ಶೇಕಡಾ 15 ರಿಂದ ಶೇಕಡಾ 17ಕ್ಕೆ ಏರಿಕೆ ಆಗಲಿದೆ. ಜೊತೆಗೆ ಪರಿಶಿಷ್ಟ ಪಂಗಡದವರಿಗೆ (ST) ಶೇಕಡಾ 3ರಿಂದ ಶೇಕಡಾ 7ಕ್ಕೆ ಹೆಚ್ಚಾಗುವ ಸಾಧ್ಯತೆ ಇದೆ.
 

Video Top Stories