ಮುಂದಿನ ಕ್ಯಾಬಿನೆಟ್‌ನಲ್ಲಿ ಗ್ಯಾರಂಟಿಗಳ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ: ಸಿಎಂ ಸಿದ್ದರಾಮಯ್ಯ

ಮೊದಲ ಬಾರಿಗೆ ಗೆದ್ದಿರುವವರಿಗೆ ಸಚಿವ ಸ್ಥಾನ ನೀಡಿಲ್ಲ. ಶೀಘ್ರದಲ್ಲೇ 5 ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ ಎಂದು ಸಂಪುಟ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Share this Video
  • FB
  • Linkdin
  • Whatsapp

ಹಲವು ಬಾರಿ ಗೆದ್ದಿರುವವರನ್ನು ಮಂತ್ರಿಗಳನ್ನಾಗಿ ಮಾಡಲಾಗಿದೆ. ಸಚಿವ ಸಂಪುಟದಲ್ಲಿ ಹೊಸಬರು, ಹಳೆಯವರು ಇದ್ದಾರೆ. ಸರ್ಕಾರ ಜನರಿಗೆ ಕೊಟ್ಟಿರುವ ಭರವಸೆಗಳನ್ನು ಈಡೇರಿಸಬೇಕಾಗಿದೆ. ಜನ ಬದಲಾವಣೆ ಬಯಸಿದ್ದಾರೆ. ಹಾಗಾಗಿ ನಾವು ಹೊಸ ರೂಪ ಕೊಡಲು ತೀರ್ಮಾನಿಸಿದ್ದೇವೆ. ಈಗ ಕೊಟ್ಟಿರುವ ಗ್ಯಾರಂಟಿಗಳ ಬಗ್ಗೆ ಮುಂದಿನ ಕ್ಯಾಬಿನೆಟ್‌ ಸಭೆಯಲ್ಲಿ ತೀರ್ಮಾನ ಕೈಗೊಳ್ಳುತ್ತೇವೆ. ನಾವು ಮೊದಲನೇ ಬಾರಿ ಗೆದ್ದಿರುವವರಿಗೆ ಯಾರಿಗೂ ಸಚಿವ ಸ್ಥಾನ ಕೊಟ್ಟಿಲ್ಲ. ಅಸಮಾಧಾನ ಇವೆಲ್ಲಾ ಇದ್ದೇ ಇರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ಬೆಳಗಾವಿಗೆ ನಾಳೆ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ್; ಭರ್ಜರಿ ಸ್ವಾಗತಕ್ಕೆ ಕಾರ್ಯಕರ್ತರು ಸಜ್ಜು!

Related Video