BIG BREAKING ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಬಂಧನಕ್ಕೆ ಮುಹೂರ್ತ ಫಿಕ್ಸ್?
18, Nov 2019, 11:47 AM IST
ಬೆಂಗಳೂರು (ನ.18): ಉತ್ತರ ಕರ್ನಾಟಕದ ಪ್ರಭಾವಿ ಕಾಂಗ್ರೆಸ್ ನಾಯಕ, ಮಾಜಿ ಸಚಿವ ವಿನಯ್ ಕುಲಕರ್ಣಿ ಶೀಘ್ರದಲ್ಲಿ ಬಂಧನಕ್ಕೊಳಗಾಗುವ ಲಕ್ಷಣಗಳು ಕಾಣಿಸುತ್ತಿವೆ. ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣವನ್ನು ತನಿಖೆ ನಡೆಸುತ್ತಿರುವ CBIಗೆ ಮಹತ್ವದ ಮಾಹಿತಿಯನ್ನು ಕಲೆಹಾಕಿದೆ.
2016 ಜೂನ್ 16ರಂದು ಯೋಗೇಶ್ ಗೌಡರನ್ನು ಹತ್ಯೆ ಮಾಡಲಾಗಿತ್ತು. ಆ ವೇಳೆ ಸಚಿವರಾಗಿದ್ದ ವಿನಯ್ ಕುಲಕರ್ಣಿ ಹೆಸರು ಪ್ರಕರಣದಲ್ಲಿ ಥಳಕು ಹಾಕಿಕೊಂಡಿತ್ತು. ಪೊಲೀಸರ ತನಿಖೆ ಬಗ್ಗೆ ಅಪಸ್ವರ ಕೇಳಿಬಂದ ಹಿನ್ನೆಲೆಯಲ್ಲಿ, ಪ್ರಕರಣವನ್ನು CBIಗೆ ವಹಿಸಲಾಗಿದೆ.
ನವೆಂಬರ್ 18ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: