ಅನಂತ್ ಕುಮಾರ್ ಹೆಗಡೆ ಹೇಳಿಕೆಯಿಂದ ಅಂತರ ಕಾಯ್ದುಕೊಂಡರಾ ಬಿಜೆಪಿ ನಾಯಕರು?

ಉತ್ತರ ಕನ್ನಡ ಜಿಲ್ಲಾ ಸಂಸದ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ದ್ವೇಷ ಭಾಷಣ ಹಾಗೂ ಜಿಲ್ಲೆಯಲ್ಲಿ ಅಶಾಂತಿ ಮೂಡಿಸಲು ಯತ್ನ ಮಾಡಿರುವುದಾಗಿ ಸಂಸದರ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲು ಮಾಡಲಾಗಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜ.14): ಉತ್ತರ ಕನ್ನಡ ಜಿಲ್ಲಾ ಸಂಸದ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ದ್ವೇಷ ಭಾಷಣ ಹಾಗೂ ಜಿಲ್ಲೆಯಲ್ಲಿ ಅಶಾಂತಿ ಮೂಡಿಸಲು ಯತ್ನ ಮಾಡಿರುವುದಾಗಿ ಸಂಸದರ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲು ಮಾಡಲಾಗಿದೆ. ಐಪಿಸಿ ಸೆಕ್ಷನ್ 505 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಹಾಗೂ 153 (ಗಲಭೆಗೆ ಪ್ರಚೋದನೆ) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಬರಿ ಮಸೀದಿಯಂತೆ ದೇವಸ್ಥಾನಗಳ ಕುರುಹು ಇರುವ ಇತರ ಮಸೀದಿಗಳನ್ನು ಒಡೆಯುವುದಾಗಿ ಸಂಸದರು ಸುಳಿವು ನೀಡಿದ್ದರು. ಜೊತೆಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನ ಹಾಗೂ ಟೀಕಾಸ್ತ್ರ ಪ್ರಯೋಗಿಸಿದ್ದರು. ಅಲ್ಲದೇ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರಿಗೆ ಸಂತರ ಶಾಪವಿತ್ತು ಎಂದು ಹೇಳಿಕೆ ನೀಡಿದ್ದರು. ಇದೀಗ ಅನಂತ್ ಕುಮಾರ್ ಹೆಗಡೆ ಹೇಳಿಕೆಯಿಂದ ಬಿಜೆಪಿ ನಾಯಕರು? ಅಂತರ ಕಾಯ್ದುಕೊಂಡಂತೆ ಕಾಣುತ್ತಿದೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

Related Video