Dinesh Gundu Rao:ಒಬ್ಬರೇ KPCC ಅಧ್ಯಕ್ಷ ಸ್ಥಾನದಲ್ಲಿ ಕೂರಲು ಸಾಧ್ಯವಿಲ್ಲ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರ ಬದಲಾವಣೆಯ ಕುರಿತು ಇತ್ತೀಚೆಗೆ ಚರ್ಚೆಗಳು ನಡೆಯುತ್ತಿವೆ. ಪ್ರಸ್ತುತ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೆಲವರು ಒಬ್ಬರಿಗೆ ಒಂದೇ ಹುದ್ದೆ ಎಂಬ ನಿಯಮವನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಈ ಕುರಿತು ಡಿ.ಕೆ. ಶಿವಕುಮಾರ್ ಅವರು, ನೂರು ಕಾಂಗ್ರೆಸ್ ಕಚೇರಿಗಳ ಶಂಕುಸ್ಥಾಪನೆಯ ನಂತರ ನಾನು ಮುಕ್ತನಾಗುತ್ತೇನೆ, ಆ ಬಳಿಕ ಯಾರು ಬೇಕಾದರೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ. ಇದಕ್ಕೂ ಮುನ್ನ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಇತರ ರಾಜ್ಯಗಳಲ್ಲಿ ಪಿಸಿಸಿ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗಿದೆ; ಕರ್ನಾಟಕದಲ್ಲೂ ಶೀಘ್ರದಲ್ಲೇ ಬದಲಾವಣೆ ಆಗಬಹುದು ಎಂದು ಸುಳಿವು ನೀಡಿದ್ದರು. ಆದರೆ, ಖರ್ಗೆ ಅವರು ನಂತರದಲ್ಲಿ ಕರ್ನಾಟಕದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಬಗ್ಗೆ ನಾನು ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದರು. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared