ಸಿದ್ದರಾಮಯ್ಯ- ಡಿಕೆಶಿ ನಡುವೆ ದೋಸ್ತಿ ಬೆಸೆಯಿತಾ ಸಿದ್ದರಾಮೋತ್ಸವ...?

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಮೃತ ಮಹೋತ್ಸವ ಕಾಂಗ್ರೆಸ್‌ನಲ್ಲಿ ಹೊಸ ಉರುಪು ತಂದಿದೆ. ಅದರಲ್ಲೂ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರ ಆಲಿಂಗನ ಕೈ ಕಾರ್ಯಕರ್ತರಲ್ಲಿ ಸಂತಸ ಮೂಡಿಸಿದೆ.  

Share this Video
  • FB
  • Linkdin
  • Whatsapp

ಬೆಂಗಳೂರು, (ಆಗಸ್ಟ್.04): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಮೃತ ಮಹೋತ್ಸವ ಕಾಂಗ್ರೆಸ್‌ನಲ್ಲಿ ಹೊಸ ಉರುಪು ತಂದಿದೆ. ಅದರಲ್ಲೂ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರ ಆಲಿಂಗನ ಕೈ ಕಾರ್ಯಕರ್ತರಲ್ಲಿ ಸಂತಸ ಮೂಡಿಸಿದೆ.

ಸಿದ್ದು, ಡಿಕೆಶಿ ಆಲಿಂಗನ ನೋಡಿ ಖುಷಿ: ಇಬ್ಬರ ಒಗ್ಗಟ್ಟಿನಿಂದ ಮುಂದೆ ಪಕ್ಷ ಅಧಿಕಾರಕ್ಕೆ, ರಾಹುಲ್‌ ಗಾಂಧಿ

ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಶುರುವಾಗಿತ್ತು. ಅದರಲ್ಲೂ ಮುಖ್ಯವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಧ್ಯೆ ಮುಸುಕಿನ ಗುದ್ದಾಟ ತಾರಕಕ್ಕೇರಿತ್ತು. ಇದೀಗ ಸಿದ್ದರಾಮಯ್ಯಗೆ ರಾಮನಗರ ರೇಷ್ಮೆ ಶಾಲು ಹೊದಿಸಿ, ಅಪ್ಪಿಕೊಳ್ಳುವ ಮೂಲಕ ಡಿಕೆಶಿ ಕೊಟ್ಟ ಸಂದೇಶವೇನು? ಸಿದ್ದರಾಮಯ್ಯ- ಡಿಕೆಶಿ ಮಧ್ಯೆ ದೋಸ್ತಿ ಬೆಸೆಯಿತಾ ಸಿದ್ದರಾಮೋತ್ಸವ?

Related Video