Asianet Suvarna News Asianet Suvarna News

ಹೈಕಮಾಂಡ್ ಬುಲಾವ್, ದಿಢೀರ್ ದೆಹಲಿಗೆ ಹಾರಿದ ಡಿಕೆಶಿ

ಮುಂಬರುವ ವಿಧಾನಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ ಹಂಚಿಕೆ ವಿಚಾರವಾಗಿ ಮಾತುಕತೆ ನಡೆಸುವ ಸಲುವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ದಿಢೀರ್ ದೆಹಲಿಗೆ (New Delhi) ಹಾರಿದ್ದಾರೆ.

ಮುಂಬರುವ ವಿಧಾನಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ ಹಂಚಿಕೆ ವಿಚಾರವಾಗಿ ಮಾತುಕತೆ ನಡೆಸುವ ಸಲುವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ದಿಢೀರ್ ದೆಹಲಿಗೆ (New Delhi) ಹಾರಿದ್ದಾರೆ. ಸೋನಿಯಾ ಗಾಂಧಿ (Sonia Gandhi) ರಾಹುಲ್ ಗಾಂಧಿ ಜೊತೆ ಚರ್ಚೆ ನಡೆಸಿದ್ದಾರೆ. 

ನಾನೇ ಬಿಜೆಪಿ ಅಭ್ಯರ್ಥಿ ಎಂದ ಹೊರಟ್ಟಿ, ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದ ಈಶ್ವರಪ್ಪ..!

ವಿಧಾನ ಪರಿಷತ್‌ (Vidhana Parishad) ಟಿಕೆಟ್‌ ಹಂಚಿಕೆ ಬಗ್ಗೆ ಹಲವಾರು ಹೆಸರುಗಳ ಬಗ್ಗೆ ಚರ್ಚೆಯಾಗಿದೆ. ಆದರೆ ಯಾರಿಗೆ ಟಿಕೆಟ್‌ ನೀಡುವ ಬಗ್ಗೆ ಚರ್ಚೆ ಆಗಿದೆ ಎಂದು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಎಲ್ಲರ ಬಗ್ಗೆಯೂ ಸುದೀರ್ಘ ಸಮಾಲೋಚನೆ ನಡೆಸಲಾಗಿದೆ. ಹೈಕಮಾಂಡ್‌ ತಿರ್ಮಾನ ಕೈಗೊಳ್ಳಲಿದೆ ಎಂದರು.

ಡಿ.ಕೆ. ಶಿವಕುಮಾರ್‌ ಅವರು ಉತ್ತರ ಕರ್ನಾಟಕದ ಹಿರಿಯ ನಾಯಕ ಎಸ್‌.ಆರ್‌.ಪಾಟೀಲ್‌ ಪರ ಲಾಬಿ ನಡೆಸಿರುವುದು ಹಾಗೂ ಪಾಟೀಲ್‌ ಆಯ್ಕೆಗೆ ಸಿದ್ದರಾಮಯ್ಯ ಸುತರಾಂ ಒಪ್ಪದಿರುವುದು ಕಗ್ಗಂಟು ಸೃಷ್ಟಿಸಿದೆ ಎನ್ನಲಾಗಿದೆ. ಎರಡು ಸ್ಥಾನಗಳ ಪೈಕಿ ಒಂದನ್ನು ಲಿಂಗಾಯತ ಸಮುದಾಯಕ್ಕೆ ನೀಡಬೇಕು ಎಂಬ ಬಗ್ಗೆ ಉಭಯ ನಾಯಕರಲ್ಲೂ ಭಿನ್ನಾಭಿಪ್ರಾಯ ಇಲ್ಲ. 

Video Top Stories