ಡಿಕೆಶಿಗೆ ಮತ್ತೊಂದು ಸಂಕಷ್ಟ; ಪ್ರಚಾರ ಮೊಟಕುಗೊಳಿಸಿ ಬೆಂಗ್ಳೂರಿಗೆ ದೌಡು!
- ಚುನಾವಣಾ ಪ್ರಚಾರದಲ್ಲಿ ಬಿಝಿಯಾಗಿರುವ ಕಾಂಗ್ರೆಸ್ ನಾಯಕ ಡಿಕೆಶಿಗೆ ಸಂಕಷ್ಟ!
- ಅರ್ಧದಲ್ಲೇ ಪ್ರಚಾರ ಮೊಟಕುಗೊಳಿಸಿ ಬೆಂಗಳೂರಿಗೆ ದೌಡಾಯಿಸಿದ ಡಿಕೆಶಿ
- ಡಿ.05ಕ್ಕೆ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ, ಮಂಗಳವಾರ ಬಹಿರಂಗ ಪ್ರಚಾರಕ್ಕೆ ತೆರೆ
ಹುಬ್ಬಳ್ಳಿ (ಡಿ.02): ಉತ್ತರ ಕರ್ನಾಟಕ ಭಾಗದಲ್ಲಿ ಉಪಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ತಮ್ಮ ಪ್ರಚಾರ ಅಭಿಯಾನವನ್ನು ಅರ್ಧದಲ್ಲೇ ಮೊಟಕುಗೊಳಿಸಿ ಡಿಕೆಶಿ ಬೆಂಗಳೂರಿಗೆ ವಾಪಾಸಾಗಿದ್ದಾರೆ.
ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ಒಟ್ಟು 165 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಡಿ.09ಕ್ಕೆ ಫಲಿತಾಂಶ ಪ್ರಕಟವಾಗಲಿದೆ.