Asianet Suvarna News Asianet Suvarna News

ಡಿಕೆಶಿ ರಾಜಕೀಯ ಭವಿಷ್ಯಕ್ಕೆ ಮುಳುವಾಗುತ್ತಾ ಅಕ್ರಮ ಹಣ ವರ್ಗಾವಣೆ ಕೇಸ್..?

  ಕೆಪಿಸಿಸಿ ಅಧ್ಯಕ್ಷ  ಡಿಕೆ ಶಿವಕುಮಾರ್‌ಗೆ ಇಡಿ ಪ್ರಕರಣ ಮತ್ತೆ ಸಂಕಷ್ಟ ತಂದೊಡ್ಡಿದೆ. 2 ವರ್ಷ 4 ತಿಂಗಳ ಬಳಿಕ  ದೆಹಲಿಯ ರೋಸ್ ಅವೆನ್ಯೂ ವಿಶೇಷ ನ್ಯಾಯಾಲಯಕ್ಕೆ  ಜಾರಿ ನಿರ್ದೇಶನಾಲಯ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದರು.   ಇದೀಗ ಡಿಕೆಶಿ ರಾಜಕೀಯ ಭವಿಷ್ಯಕ್ಕೆ ಮುಳುವಾಗುತ್ತಾ ಅಕ್ರಮ ಹಣ ವರ್ಗಾವಣೆ ಕೇಸ್..?

ಬೆಂಗಳೂರು,  (ಮೇ.26 ) : ಕೆಪಿಸಿಸಿ ಅಧ್ಯಕ್ಷ  ಡಿಕೆ ಶಿವಕುಮಾರ್‌ಗೆ ಇಡಿ ಪ್ರಕರಣ ಮತ್ತೆ ಸಂಕಷ್ಟ ತಂದೊಡ್ಡಿದೆ. 2 ವರ್ಷ 4 ತಿಂಗಳ ಬಳಿಕ  ದೆಹಲಿಯ ರೋಸ್ ಅವೆನ್ಯೂ ವಿಶೇಷ ನ್ಯಾಯಾಲಯಕ್ಕೆ  ಜಾರಿ ನಿರ್ದೇಶನಾಲಯ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದರು. 

ಡಿಕೆಶಿ ವಿರುದ್ಧದ ಅಕ್ರಮ ಹಣ ವರ್ಗಾವಣೆ ಕೇಸ್, ವಿಚಾರಣೆಯನ್ನು ಮೇ.31ಕ್ಕೆ ಮುಂದೂಡಿದ ಕೋರ್ಟ್

50 ರಿಂದ 55 ಪುಟಗಳ ಚಾರ್ಜ್ ಶೀಟ್  ಜೊತೆಗೆ ಒಂದು ಸಣ್ಣ ಟ್ರಂಕ್ ನಲ್ಲಿ ದಾಖಲೆಗಳನ್ನು ಇಡಿ ಅಧಿಕಾರಿಗಳು ಸಲ್ಲಿಸಿದರು. ಈ ಪ್ರಕರಣದಲ್ಲಿ ಡಿಕೆ ಶಿವಕುಮಾರ್ 48 ದಿನ ದೆಹಲಿಯ ತಿಹಾರ್ ಜೈಲಿನಲ್ಲಿ ಬಂಧಿಯಾಗಿದ್ದರು. ಇದು ರಾಜಕೀಯ ಪ್ರೇರಿತ ದಾಳಿ ಎಂದು ಕಾಂಗ್ರೆಸ್‌ ಗಂಭೀರ ಆರೋಪ ಮಾಡಿತ್ತು. ಆದರೆ ದೆಹಲಿಯ ಡಿಕೆಶಿ ನಿವಾಸದಲ್ಲಿ ನಗದು ಲಭ್ಯವಾಗಿತ್ತು. ಈ ಸಂಬಂಧ ಡಿಕೆಶಿ ಅವರನ್ನು ಬಂಧಿಸಲಾಗಿತ್ತು. ಇದೀಗ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದ್ದು, ಚುನಾವಣೆ ಸಮೀಪವಾಗುತ್ತಿರುವ ಸಂದರ್ಭದಲ್ಲಿ ಶಿವಕುಮಾರ್‌ಗೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ. ಇದೀಗ ಡಿಕೆಶಿ ರಾಜಕೀಯ ಭವಿಷ್ಯಕ್ಕೆ ಮುಳುವಾಗುತ್ತಾ ಅಕ್ರಮ ಹಣ ವರ್ಗಾವಣೆ ಕೇಸ್..?

Video Top Stories