ರಾಕೇಶ್ ಟಿಕಾಯತ್‌ಗೆ ಮಸಿ, ಹಲ್ಲೆ: 'ರಾಜ್ಯ, ರೈತರಿಗೆ ಮಾಡಿದ ಅವಮಾನ'

ಬೆಂಗಳೂರಿನ ಗಾಂಧಿಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ 'ರೈತ ಚಳವಳಿ-ಆತ್ಮಾವಲೋಕನ ಹಾಗೂ ಸ್ಪಷ್ಟೀಕರಣ ಸಭೆ'ಯಲ್ಲಿ ರಾಷ್ಟ್ರೀಯ ಕಿಸಾನ್ ಮೋರ್ಚಾ ಅಧ್ಯಕ್ಷ ರಾಕೇಶ್ ಟಿಕಾಯತ್ ಮತ್ತು ರೈತ ಮುಖಂಡ ಯದುವೀರ್ ಸಿಂಗ್ ಮೇಲೆ ಪತ್ರಕರ್ತರ ಸೋಗಿನಲ್ಲಿದ್ದ ಮೂವರು‌ ಕಿಡಿಗೇಡಿಗಳು ಏಕಾಏಕಿ ವೇದಿಕೆ ಮೇಲೆ ಬಂದು ಕಪ್ಪು‌ ಮಸಿ ಎರಚಿದ್ದಾರೆ. ಇದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿವೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಮೇ.30): ನಗರದ ಗಾಂಧಿಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ 'ರೈತ ಚಳವಳಿ-ಆತ್ಮಾವಲೋಕನ ಹಾಗೂ ಸ್ಪಷ್ಟೀಕರಣ ಸಭೆ'ಯಲ್ಲಿ ರಾಷ್ಟ್ರೀಯ ಕಿಸಾನ್ ಮೋರ್ಚಾ ಅಧ್ಯಕ್ಷ ರಾಕೇಶ್ ಟಿಕಾಯತ್ ಮತ್ತು ರೈತ ಮುಖಂಡ ಯದುವೀರ್ ಸಿಂಗ್ ಮೇಲೆ ಪತ್ರಕರ್ತರ ಸೋಗಿನಲ್ಲಿದ್ದ ಮೂವರು‌ ಕಿಡಿಗೇಡಿಗಳು ಏಕಾಏಕಿ ವೇದಿಕೆ ಮೇಲೆ ಬಂದು ಕಪ್ಪು‌ ಮಸಿ ಎರಚಿದ್ದಾರೆ.

ರಾಕೇಶ್ ಟಿಕಾಯತ್‌ಗೆ ಮಸಿ, ಹಲ್ಲೆ: ಭಾರತ ರಕ್ಷಣಾ ವೇದಿಕೆ ಅಧ್ಯಕ್ಷ ಅರೆಸ್ಟ್

ಇದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಈ ಘಟನೆಯನ್ನು ಖಂಡಿಸಿದ್ದಾರೆ. ಅಲ್ಲದೇ ರಾಜ್ಯ, ರೈತರಿಗೆ ಮಾಡಿದ ಅವಮಾನ ಎಂದಿದ್ದಾರೆ.

Related Video