Asianet Suvarna News Asianet Suvarna News

ಡಿಕೆಶಿ ಆಪರೇಶನ್‌ ಹೇಳಿಕೆ: ಬಿ.ಕೆ.ಹರಿಪ್ರಸಾದ್‌ ಹೇಳಿಕೆಯನ್ನ ಡೈವರ್ಟ್‌ ಮಾಡೋ ಹೇಳಿಕೆನಾ?

ನನಗೆ ಸಿಎಂ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತಿದೆ. ನಾನು ಯಾರ ಬಳಿಯೂ ಭಿಕ್ಷೆ ಬೇಡುವುದಿಲ್ಲ ಎಂಬ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಅವರ ಹೇಳಿಕೆ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. 

ಬೆಂಗಳೂರು (ಜು.24): ನನಗೆ ಸಿಎಂ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತಿದೆ. ನಾನು ಯಾರ ಬಳಿಯೂ ಭಿಕ್ಷೆ ಬೇಡುವುದಿಲ್ಲ ಎಂಬ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಅವರ ಹೇಳಿಕೆ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ರಾಜಕಾರಣದಲ್ಲಿ ಎಲ್ಲ ಸಮಾನರು, ಯಾವ ಅಸಮಾಧಾನವೂ ಇಲ್ಲ, ಯಾವ ಸಮುದಾಯವನ್ನೂ ತುಳಿಯುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಎಂದಿಗೂ ಮಾಡುವುದಿಲ್ಲ ಎಂದು ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಬಿ.ಕೆ. ಹರಿಪ್ರಸಾದ್ ಅವರು ಏನು ಹೇಳಿದ್ದಾರೆ ಎಂಬುದು ನನಗೆ ಸರಿಯಾಗಿ ಗೊತ್ತಿಲ್ಲ, ಹೀಗಾಗಿ ಆ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ಅದರ ಬಗ್ಗೆ ವಿಚಾರಿಸಿ ಮಾತನಾಡುತ್ತೇನೆ ಎಂದು ಡಿಸಿಎಂ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಮಾಡೋದು, ಇಳಿಸೋದು ಗೊತ್ತು ಎಂದು ಬಿ ಕೆ ಹರಿಪ್ರಸಾದ್ ಹೇಳಿದ್ದಾರಲ್ಲ ಎಂಬ ಪ್ರಸ್ತಾಪಕ್ಕೆ ಡಿಸಿಎಂ ಹೀಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದರು.

Video Top Stories