Asianet Suvarna News Asianet Suvarna News

ಮುಗಿದ ಅಧ್ಯಾಯದ ಬಗ್ಗೆ ಚರ್ಚಿಸಲು ಆಸಕ್ತಿ ಇಲ್ಲ: ಎಚ್‌ಡಿಕೆ ಹೇಳಿಕೆಗೆ ಡಿಕೆಶಿ ಪ್ರತಿಕ್ರಿಯೆ

Oct 12, 2021, 6:27 PM IST

ಬೆಂಗಳೂರು, (ಅ.12): ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರ ಬೀಳಿಸಿದ್ದೇ ಮಾಜಿ ಸಿಎಂ ಸಿದ್ದರಾಮಯ್ಯ ಎಂದು ಎಚ್‌ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ದೊಣ್ಣೆ ನಾಯಕನ ಅಪ್ಪಣೆ ಪಡೆದು ಟಿಕೆಟ್ ಕೊಡ್ಬೇಕಾ? ಸಿದ್ದು ವಿರುದ್ಧ ಎಚ್‌ಡಿಕೆ ಕೆಂಡಾಮಂಡಲ

ಕುಮಾರಸ್ವಾಮಿ ಅವರ ಈ ಆರೋಪಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಅದು ಮುಗಿದ ಅಧ್ಯಾಯ. ಆ ಮುಗಿದ ಅಧ್ಯಾಯದ ಬಗ್ಗೆ ಚರ್ಚಿಸಲು ಆಸಕ್ತಿ ಇಲ್ಲ ಎಂದರು.