ಡಿಸಿಎಂ ಡಿ.ಕೆ. ಶಿವಕುಮಾರ್ ₹2000 ಕೋಟಿ ಭ್ರಷ್ಟಾಚಾರ; ಇಡಿ, ಲೋಕಾಯುಕ್ತಕ್ಕೆ ಶಾಸಕ ಮುನಿರತ್ನ ದೂರು!
ಬೆಂಗಳೂರು ನಗರಕ್ಕೆ ಹಂಚಿಕೆಯಾದ 2000 ಕೋಟಿ ರೂ. ಅನುದಾನದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಲೋಕಾಯುಕ್ತ, ಜಾರಿ ನಿರ್ದೇಶನಾಲಯ ಹಾಗೂ ಸಿಬಿಐಗೆ ದೂರು ದಾಖಲಾಗಿದೆ.
ರಾಜ್ಯದ ಉಪ ಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್ ಆದೇಶ ಮೂಲಕ ಬೆಂಗಳೂರು ನಗರಕ್ಕೆ ಈಗಾಗಲೇ ಸುಮಾರು ರೂ.2000 ಕೋಟಿಗಳ ಅನುದಾನವನ್ನು ಹಂಚಿಕೆ ಮಾಡಲು ಉದ್ದೇಶಿಸಲಾಗಿದೆ. ಅದರಲ್ಲಿ ವಿಶ್ವಬ್ಯಾಂಕಿನಿಂದ ಸಾಲದ ರೂಪದಲ್ಲಿ ಪಡೆದಂತಹ ಸುಮಾರು 1,700 ಕೋಟಿ ರೂ.ಗಳ ಹಣ ಮತ್ತು ಸಾರ್ವಜನಿಕರ ತೆರಿಗೆ ಹಣ ರೂ.300 ಕೋಟಿಗಳ ಅನುದಾನವಾಗಿದೆ.
1. ಮಹದೇವಪುರ ವಿಧಾನಸಭಾ ಕ್ಷೇತ್ರ ರೂ. 540 ಕೋಟಿಗಳು,
2. ಯಶವಂತಪುರ ವಿಧಾನಸಭಾ ಕ್ಷೇತ್ರ ರೂ. 232 ಕೋಟಿಗಳು,
3. ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರ ರೂ. 226 ಕೋಟಿಗಳು
4. ಈಸ್ಟ್ ವೆಸ್ಟ್ ಮತ್ತು ಸೌತ್ ವಿಭಾಗಗಳಿಗೆ ರೂ. 215 ಕೋಟಿಗಳು
5. ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ರೂ. 208 ಕೋಟಿಗಳು,
6. ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ರೂ. 205 ಕೋಟಿಗಳು,
7. ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರ ರೂ. 112 ಕೋಟಿಗಳು
8. ಯಲಹಂಕ ವಿಧಾನಸಭಾ ಕ್ಷೇತ್ರ ರೂ. 81 ಕೋಟಿಗಳು
ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶ್ರೀ ಎಸ್.ಟಿ ಸೋಮಶೇಖರ್‌ರವರು ಬಿಜೆಪಿ ಶಾಸಕರಾಗಿದ್ದರೂ ಸಹ ಕಾಂಗ್ರೆಸ್ ಪಕ್ಷದ ಶಾಸಕರಂತೆ ಕಾರ್ಯ ನಿರ್ವಹಿಸುತ್ತಿರುವುದು ಹಾಗೂ ಇವರಿಗೆ ಬಿ.ಬಿ.ಎಂ.ಪಿ ವ್ಯಾಪ್ತಿಯ ಕೇವಲ 05 ವಾರ್ಡ್‌ಗಳಿದ್ದರೂ ಸಹ ಸುಮಾರು ರೂ. 232 ಕೋಟಿಗಳನ್ನು ಹಂಚಿಕೆ ಮಾಡಲಾಗಿದೆ. ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹೆಚ್.ಡಿ ಕುಮಾರಸ್ವಾಮಿ ಎದುರಾಳಿಯಾಗಿ ಮಂಡ್ಯ ಲೋಕಸಭಾ ಕ್ಷೇತ್ರದ ಪರಾರ್ಜಿತ ಅಭ್ಯರ್ಥಿ ಕಾಂಗ್ರೆಸ್ ಪಕ್ಷದ ಸ್ಟಾರ್ ಚಂದ್ರು ಗುತ್ತಿಗೆದಾರರಾಗಿದ್ದು, ಇವರ ಮಾಲೀಕತ್ವದ ಸ್ಟಾರ್ ಬಿಲ್ಡರ್ಸ್ ಹೆಸರಿನ ಇವರಿಗೆ ಉದ್ದೇಶಿತ ಯಶವಂತಪುರ ವಿಧಾನಸಭಾ ಕ್ಷೇತ್ರ ರೂ. 232 ಕೋಟಿಗಳ ಅನುದಾನವನ್ನು ಹಂಚಿಕೆ ಮಾಡಲು ಚರ್ಚೆ ನಡೆದಿರುತ್ತದೆ.
ಇದನ್ನೂ ಓದಿ: ಬೆಂಗಳೂರು ಸಮಸ್ಯೆ ಬಗ್ಗೆ ಅಸಹಾಯಕತೆ ವ್ಯಕ್ತಪಡಿಸಿದ ಡಿಸಿಎಂ! Kannada News | Suvarna News
ಬೆಂಗಳೂರು ನಗರಕ್ಕೆ ನೀಡುವ ಅನುದಾನಕ್ಕೆ ಸಂಬಂಧಪಟ್ಟಂತೆ ಹೊರರಾಜ್ಯದ ಆಂಧ್ರಪ್ರದೇಶದ ಕೆಲವು ಬಲಿಷ್ಟ ಗುತ್ತಿಗೆದಾರರು ನಮ್ಮ ರಾಜ್ಯದ ಗುತ್ತಿಗೆದಾರರ ಮೇಲೆ ಸವಾರಿ ಮಾಡಲು ಬಂದಿದ್ದು ಸುಮಾರು ಶೇ.15ರಷ್ಟು ಕಮಿಷನ್ ಹಣದ ಮುಂಗಡವನ್ನು ಈಗಾಗಲೇ ಕರ್ನಾಟಕ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಇವರ ಮುಖೇನ ಚರ್ಚಿಸಿ ಮಂಗಡ ಹಣವನ್ನು ಸಂದಾಯ ಮಾಡಿರುತ್ತಾರೆ ಈ ಮೂಲಕ ರಾಜ್ಯದ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೆಸರಲ್ಲಿ ಕೋಟ್ಯಂತರ ಹಣ ಲೂಟಿ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ವಿರುದ್ಧ ಆರ್.ಆರ್. ನಗರ ಶಾಸಕ ಮುನಿರತ್ನ ಅವರು ಲೋಕಾಯುಕ್ತ ಇಲಾಖೆ, ಜಾರಿ ನಿರ್ದೇಶನಾಲಯ ಹಾಗೂ ಸಿಬಿಐಗೆ ದೂರು ದಾಖಲು ಮಾಡಿದ್ದಾರೆ.