
Dr. G. Parameshwara: ದಲಿತ ಸಮಾವೇಶ ಮುಂದೂಡಿಕೆ, ಪರಮೇಶ್ವರ್ ಸ್ಪಷ್ಟನೆ
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಸಿದ್ದಯ್ಯನಕೋಟೆ ಗ್ರಾಮದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು, ಸಚಿವ ರಾಜಣ್ಣ ಅವರ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ ಎಂದು ತಿಳಿಸಿದರು. ದಲಿತ ಸಮಾವೇಶದ ಬಗ್ಗೆ ತಮಗೆ ತಿಳಿದಿಲ್ಲವೆಂದೂ, ಆದರೆ ಈ ಹಿಂದೆ ತಾವು ದಲಿತ ಸಮಾವೇಶ ಮಾಡಲು ಹೊರಟಿದ್ದು ಹೈಕಮಾಂಡ್ ಸೂಚನೆ ಮೇರೆಗೆ ಮುಂದೂಡಲಾಗಿದೆ ಎಂದೂ ಹೇಳಿದರು. ಚುನಾವಣೆ ಪೂರ್ವದಲ್ಲಿ ಚಿತ್ರದುರ್ಗದಲ್ಲಿ ಎಸ್ಸಿ, ಎಸ್ಟಿ ಸಮಾವೇಶ ಮಾಡಲಾಗಿತ್ತು. ಅದರ ಕೆಲ ನಿರ್ಣಯಗಳು ಅನುಷ್ಠಾನಗೊಂಡಿದ್ದು, ಇನ್ನೂ ಕೆಲವು ಆಗಿಲ್ಲ. ಆ ಬಗ್ಗೆ ಚರ್ಚಿಸಲು ಸಮಾವೇಶಕ್ಕೆ ಸಿದ್ಧರಾಗಿದ್ದೆವು, ಆದರೆ ರಾಜಕೀಯ ಕಾರಣಕ್ಕೆ ಸದ್ಯಕ್ಕೆ ಬೇಡ ಎಂದು ಹೈಕಮಾಂಡ್ ಸೂಚಿಸಿತ್ತು ಎಂದು ಪರಮೇಶ್ವರ್ ಹೇಳಿದರು. ಸಿಎಂ ಬದಲಾವಣೆ ಕುರಿತ ಪ್ರಶ್ನೆಗೆ ಉತ್ತರಿಸಲು ಅವರು ನಿರಾಕರಿಸಿದರು.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared