ಸೋನಿಯಾ ಗಾಂಧಿ ಸಮನ್ಸ್‌ಗೆ ಕಾಂಗ್ರೆಸ್ ಕೆಂಡ, ಹೈಕಮಾಂಡ್ ನೋಟಿಸ್‌ಗೆ ಜಮೀರ್ ಥಂಡಾ!
ಸೋನಿಯಾ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ಅನವಶ್ಯಕ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಇತ್ತ ಸಚಿವ ಸುನಿಲ್ ಕುಮಾರ್ ಕಾಂಗ್ರೆಸ್‌ಗೆ ಭಯ ಕಾಡುತ್ತಿದೆ. ಇದಕ್ಕಾಗಿ ಪ್ರತಿಭಟನೆ ಮೂಲಕ ದಿಕ್ಕು ತಪ್ಪಿಸುವ ಯತ್ನ ಮಾಡುತ್ತಿದೆ ಎಂದಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಸತತ 6 ಗಂಟೆ ವಿಚಾರಣೆ ಎದುರಿಸಿದ್ದಾರೆ. ಮತ್ತೆ ನಾಳೆ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಲಾಗಿದೆ. ಸ್ವತಃ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಘಟಾನುಘಟಿ ನಾಯಕರು ಸೋನಿಯಾ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಭಾರಿ ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ ಹಲವರನ್ನು ವಶಕ್ಕೆ ಪಡದ ಪೊಲೀಸರ ಮೇಲೆ ಇದೀಗ ಮತ್ತೊಂದು ಆರೋಪವೂ ಕೇಳಿಬಂದಿದೆ. ಇತ್ತ ಜಮೀರ್ ಅಹಮ್ಮದ್ ವಿವಾದಾತ್ಮಕ ಹೇಳಿಕೆಯಿಂದ ಕಾಂಗ್ರೆಸ್ ತೀವ್ರ ಮುಜುಗರ ಅನುಭವಸಿದೆ. ಇತ್ತ ಕಾಂಗ್ರೆಸ್ ಹೈಕಮಾಂಡ್ ಜಮೀರ್‌ಗೆ ನೋಟಿಸ್ ನೀಡಿದ ಬೆನ್ನಲ್ಲೇ ಥಂಡಾ ಹೊಡೆದಿದ್ದಾರೆ. ಆದರೆ ನನಗೆ ನೋಟಿಸ್ ಬಂದಿಲ್ಲ ಎಂದು ಜಮೀರ್ ಹೇಳಿದ್ದಾರೆ.