ಭಜರಂಗದಳ ಬ್ಯಾನ್‌ ವಿವಾದ: ಕಾಂಗ್ರೆಸ್‌ ಪ್ರಣಾಳಿಕೆ ಸುಟ್ಟು ಈಶ್ವರಪ್ಪ ಆಕ್ರೋಶ

ಕಲಬುರಗಿಯಲ್ಲಿ ಕಾಂಗ್ರೆಸ್‌ ಪ್ರಣಾಳಿಕೆ ಪ್ರತಿ ಸುಟ್ಟ ಈಶ್ವರಪ್ಪ
ಭಜರಂಗದಳ ಬ್ಯಾನ್‌ ಮಾಡುವುದಾಗಿ ಹೇಳಿರುವ ಕಾಂಗ್ರೆಸ್‌
ಕಾಂಗ್ರೆಸ್‌ ಪ್ರಣಾಳಿಕೆ ವಿರೋಧಿಸುತ್ತಿರುವ ಹಿಂದೂಪರ ಸಂಘಟನೆಗಳು
 

First Published May 4, 2023, 12:01 PM IST | Last Updated May 4, 2023, 12:01 PM IST

ಕಲಬುರಗಿ: ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ನಾವು ಅಧಿಕಾರಕ್ಕೆ ಬಂದ್ರೆ ಭಜರಂಗದಳವನ್ನು ಬ್ಯಾನ್‌ ಮಾಡುತ್ತೇವೆ ಎಂದು ಹೇಳಿದೆ. ಇದಕ್ಕೆ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳು ಆಕ್ರೋಶವನ್ನು ವ್ಯಕ್ತಪಡಿಸಿವೆ. ಅಲ್ಲದೇ ರಾಜ್ಯಾದ್ಯಂತ ಹನುಮಾನ್‌ ಚಾಲೀಸಾ ಪಠಣ ಮಾಡುವ ಅಭಿಯಾನಕ್ಕೆ ಕರೆ ನೀಡಿವೆ. ಇಂದು ಸಂಜೆ 7 ಗಂಟೆಗೆ ಎಲ್ಲಾ ದೇವಾಲಯಗಳಲ್ಲಿ ಹನುಮಾನ್‌ ಚಾಲೀಸಾ ಪಠಿಸುವಂತೆ ಕರೆ ನೀಡಲಾಗಿದೆ. ಇದರ ನಡುವೆ ಕೆ.ಎಸ್‌. ಈಶ್ವರಪ್ಪ ಕಾಂಗ್ರೆಸ್‌ ಪ್ರಣಾಳಿಕೆಯನ್ನು ಸುಟ್ಟು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಕಲಬುರಗಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈಶ್ವರಪ್ಪ ಪ್ರಣಾಳಿಕೆ ಸುಟ್ಟಿದ್ದಾರೆ. ಈ ಮೂಲಕ ಕಾಂಗ್ರೆಸ್‌ ಪ್ರಣಾಳಿಕೆ ಸರಿಯಿಲ್ಲ ಎಂದು ಈಶ್ವರಪ್ಪ ಹೇಳಿದಂತಾಗಿದೆ.

ಇದನ್ನೂ ವೀಕ್ಷಿಸಿ: ಕಾಂಗ್ರೆಸ್‌ ಹಿಂದೂಗಳನ್ನು ತುಳಿಯುವ ಕೆಲಸ ಮಾಡ್ತಿದೆ: ಚಕ್ರವರ್ತಿ ಸೂಲಿಬೆಲೆ