Asianet Suvarna News Asianet Suvarna News

ಸಿದ್ದರಾಮಯ್ಯ ಅಭಿಪ್ರಾಯಕ್ಕೆ ಪ್ರತಾಪ್ ಸಿಂಹ ಶ್ಲಾಘನೆ

Sep 12, 2021, 4:08 PM IST

ಮೈಸೂರು, (ಸೆ.12): ಜಿಲ್ಲೆಯಲ್ಲಿ ಧಾರ್ಮಿಕ ಕಟ್ಟಡಗಳ ತೆರವಿಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಅಗ್ರಹಾರದ 101 ಗಣಪತಿ ದೇವಸ್ಥಾನ ತೆರವಿಗೆ ಮುಂದಾಗಿರುವ ಮೈಸೂರು ಜಿಲ್ಲಾಡಳಿತದ ವಿರುದ್ಧ ಸಂಸದ ಪ್ರತಾಪ್ ಸಿಂಗ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರಲ್ಲಿ 93 ದೇವಾಲಯ ತೆರವು : ಚರ್ಚ್ ಮತ್ತು ಮಸೀದಿ ಇಲ್ಲವೆ ಎಂದು ಸಿಂಹ ಆಕ್ರೋಶ

ಇಂದು (ಸೆ12)  ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಂಹ, ಅಧಿಕಾರಿಗಳನ್ನ ತರಾಟಗೆ ತೆಗೆದುಕೊಂಡರು. ಇದೇ ವೇಳೆ ದೇಗುಲ ತೆರವಿನ ಬಗ್ಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮಾಡಿದ್ದ ಟ್ವೀಟ್‌ಗೆ ಪ್ರತಾಪ್ ಸಿಂಹ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.