ಸಿ.ಡಿ. ಕೇಸ್‌ ವಿಚಾರಣೆಗೆ ಹಾಜರಾಗಬೇಕಿದ್ದ ರಮೇಶ್ ಜಾರಕಿಹೊಳಿ ಐಸಿಯುಗೆ ಶಿಫ್ಟ್!

ಭಾನುವಾರ ರಾತ್ರಿ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ರಮೇಶ್ ಜಾರಕಿಹೊಳಿ ಅವರ ಬಿಪಿ, ಶುಗರ್ ನಲ್ಲಿ ಏರುಪೇರಾಗಿದೆ. ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಅವರನ್ನ ಐಸಿಯುಗೆ ಶಿಫ್ಟ್ ಮಾಡಲಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.

First Published Apr 5, 2021, 3:16 PM IST | Last Updated Apr 5, 2021, 3:16 PM IST

ಬೆಂಗಳೂರು, (ಏ.05): ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿಗೆ ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿದೆ.ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಅವರು ಎಸ್‌ಐಟಿ ವಿಚಾರಣೆಗೆ ಹಾಜರಾಗಬೇಕಿತ್ತು. 

ಜಾರಕಿಹೊಳಿಗೆ ಕೊರೊನಾ ಪಾಸಿಟೀವ್, ಆಸ್ಪತ್ರೆಗೆ ದಾಖಲು

ಆದರೆ ಭಾನುವಾರ ರಾತ್ರಿ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು ಅವರ ಬಿಪಿ, ಶುಗರ್ ನಲ್ಲಿ ಏರುಪೇರಾಗಿದೆ. ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಅವರನ್ನ ಐಸಿಯುಗೆ ಶಿಫ್ಟ್ ಮಾಡಲಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.