ಮಂಡ್ಯ ರಾಜಕೀಯದ ಎಕ್ಸ್‌ಕ್ಲೂಸಿವ್‌ ದೃಶ್ಯ: ಜೆಡಿಎಸ್‌ ಮಣಿಸಲು ಕಾಂಗ್ರೆಸ್‌ ಮಾಸ್ಟರ್‌ ಪ್ಲಾನ್

ಹಳೆಯ ಮೈಸೂರು ಭಾಗದಲ್ಲಿನ ಮಂಡ್ಯ ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಗೆಲ್ಲುವ ಯೋಜನೆಯನ್ನು ವಿಫಲಗೊಳಿಸಲು ಕಾಂಗ್ರೆಸ್‌ ತಂತ್ರಗಾರಿಕೆಯನ್ನು ಹೆಣೆಯುತ್ತಿದೆ.

Share this Video
  • FB
  • Linkdin
  • Whatsapp

ಮಂಡ್ಯ (ಜ.21): ಹಳೆಯ ಮೈಸೂರು ಭಾಗದಲ್ಲಿನ ಮಂಡ್ಯ ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಗೆಲ್ಲುವ ಯೋಜನೆಯನ್ನು ವಿಫಲಗೊಳಿಸಲು ಕಾಂಗ್ರೆಸ್‌ ತಂತ್ರಗಾರಿಕೆಯನ್ನು ಹೆಣೆಯುತ್ತಿದೆ. ಈ ಮೂಲಕ ಜೆಡಿಎಸ್‌ ಭದ್ರಕೋಟೆ ಎನಿಸಿಕೊಂಡಿರುವ ಮಂಡ್ಯದಲ್ಲಿ ಜೆಡಿಎಸ್‌ನಿಂದ ಉಚ್ಛಾಟನೆಗೊಂಡಿರುವ ಮಾಜಿ ಸಂಸದ ಎಲ್.ಆರ್‌. ಶಿವರಾಮೇಗೌಡ ಹಾಗೂ ಮಾಜಿ ಸಚಿವ ಎನ್. ಚಲುವರಾಯಸ್ವಾಮಿ ಅವರೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಪ್ಲಾನ್‌ ಮಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇನ್ನು ಮಂಡ್ಯದಿಂದ ಮಾಜಿ ಸಚಿವ ಚಲುವರಾಯಸ್ವಾಮಿ ಅವರನ್ನು ಕಣಕ್ಕಿಳಿಸಿ, ನಾಗಮಂಗಲದಲ್ಲಿ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಅವಎನ್ನು ಕಣಕ್ಇಳಿಸಲು ಮಾಸ್ಟರ್‌ ಪ್ಲಾನ್‌ ಮಾಡಲಾಗುತ್ತಿದೆ. ಇನ್ನು ಚಲುವರಾಯಸ್ವಾಮಿ ಅವರೊಂದಿಗೆ ಶಿವರಾಮೇಗೌಡ ಅವರನ್ನು ದೋಸ್ತಿ ಮಾಡಿಸುವ ಮೂಲಕ ಇಬ್ಬರನ್ನೂ ಕಾಂಗ್ರೆಸ್‌ನಿಂದ ಸ್ಪರ್ಧೆಗೆ ಇಳಿಸುವ ಯೋಜನೆ ಹಾಕಿಕೊಂಡಿದ್ದಾರೆ. ಆದರೆ, ಎಲ್.ಆರ್. ಶಿವರಾಮೇಗೌಡ ಅವರು ಬೆಂಗಳೂರಿನಲ್ಲಿ ಡಿ.ಕೆ. ಶಿವಕುಮಾರ್‌ ಅವರ ಮನೆಯಲ್ಲಿ ಮಾತುಕತೆ ನಡೆಸಿದ್ದರೂ, ಕಾಂಗ್ರೆಸ್‌ ಸೇರ್ಪಡೆಯ ಬಗ್ಗೆ ಯಾವುದೇ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಒಟ್ಟಾರೆ ಮಂಡ್ಯದಲ್ಲಿ ಜೆಡಿಎಸ್‌ ಮಣಿಸಲು ಕಾಂಗ್ರೆಸ್‌ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ.

Related Video