ಸಮೀಕ್ಷಾ ವರದಿ: ಗುಜರಾತ್‌ನಲ್ಲಿ ಕಮಲ, ಅತಂತ್ರದಲ್ಲಿ ಹಿಮಾಚಲ, ದೆಹಲಿಯಲ್ಲಿ ಆಪ್ ಕಿಲ ಕಿಲ!
ಗುಜರಾತ್‌ನಲ್ಲಿ ಬಿಜೆಪಿ ಭರ್ಜರಿ ಗೆಲುವ, ಹಿಮಾಚಲದಲ್ಲಿ ಕಾಂಗ್ರೆಸ್ ಭಾರಿ ಪೈಪೋಟಿ, ದೆಹಲಿಯಲ್ಲಿ ಆಮ್ ಆದ್ಮಿ ಪಾರ್ಟಿಗೆ ಮತದಾರನ ಒಲವು. ಇದು ಚುನಾವಣೋತ್ತರ ಸಮೀಕ್ಷೆಯಲ್ಲಿ ಕಂಡು ಬಂದ ಅಂಶ. ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿ ಚುನಾವಣೋತ್ತರ ಸಮೀಕ್ಷೆಯ ಇಂಚಿಂಚು ಮಾಹಿತಿ.
ಗುಜರಾತ್, ಹಿಮಾಚಲ ಪ್ರದೇಶ ಹಾಗೂ ದೆಹಲಿ ಮಹಾನಗರ ಪಾಲಿಕೆಯ ಚುನಾವಣೋತ್ತರ ಸಮೀಕ್ಷಾ ವರದಿ ಪ್ರಕಟಗೊಂಡಿದೆ. ಈ ಬಾರಿ ಅಧಿಕಾರ ಯಾರಿಗೆ ಅನ್ನೋ ಕುತೂಹಲಕ್ಕೆ ಸಮೀಕ್ಷೆಗಳು ತಕ್ಕಮಟ್ಟಿನ ಉತ್ತರ ನೀಡಿದೆ. ಗುಜರಾತ್‌ನಲ್ಲಿ ಬಿಜೆಪಿ ದಾಖಲೆಯ ಸ್ಥಾನದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದಿದೆ. ಇತ್ತ ಹಿಮಾಚಲ ಪ್ರದೇಶದಲ್ಲಿ ಕೆಲ ಸಮೀಕ್ಷೆಗಳು ಬಿಜೆಪಿ ಮತ್ತೆ ಗದ್ದುಗೆ ಏರಲಿದೆ ಎಂದಿದೆ. ಆದರೆ ಮತ್ತೆ ಕೆಲ ಸಮೀಕ್ಷೆಗಳು ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದೆ ಎಂದಿದೆ. ಈ ಎರಡೂ ರಾಜ್ಯದಲ್ಲಿ ಸದ್ಯ ಬಿಜೆಪಿ ಅಧಿಕಾರದಲ್ಲಿದೆ. ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಲು ತೀವ್ರ ಪೈಪೋಟಿ ನಡೆಸುತ್ತಿದೆ. ಇತ್ತ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ ಗೆಲುವಿನ ನಗೆ ಬೀರಲಿದೆ ಎಂದಿದೆ. ಅಧಿಕಾರದಲ್ಲಿರುವ ಬಿಜೆಪಿ ಎರಡನೇ ಸ್ಥಾನಕ್ಕೆ ಕುಸಿಯಲಿದೆ ಎಂದಿದೆ. ಚುನಾವಣಾ ಸಮೀಕ್ಷೆ, ಗುಜರಾತ್ 2ನೇ ಹಂತದ ಮತದಾನ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.