ಪಂಚಮಸಾಲಿ ಮೀಸಲಾತಿ: 2 ಎ ಮೀಸಲಾತಿಯಿಂದ ಸರ್ಕಾರಕ್ಕೇನು ಸಮಸ್ಯೆ.?

ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2 ‘ಎ’ಅಡಿ ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿದಂತೆ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಸಮುದಾಯದ ಮುಖಂಡರ ಜೊತೆ ಮಾತುಕತೆ ನಡೆಸಲು ಸರ್ಕಾರ ಮುಂದಾಗಿದೆ. 

First Published Jun 22, 2022, 2:05 PM IST | Last Updated Jun 22, 2022, 2:07 PM IST

ಬೆಂಗಳೂರು (ಜೂ. 22): ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2 ‘ಎ’ಅಡಿ ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿದಂತೆ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಸಮುದಾಯದ ಮುಖಂಡರ ಜೊತೆ ಮಾತುಕತೆ ನಡೆಸಲು ಸರ್ಕಾರ ಮುಂದಾಗಿದೆ. 

2ಎ ಮೀಸಲಾತಿಗಾಗಿ ಪಂಚಮಸಾಲಿ ಹೋರಾಟ, ಜೂ, 27 ಗಡುವು, ಸರ್ಕಾರಕ್ಕೆ ಡ್ಯಾಮೇಜ್.?

ಇಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲರ  ನಿವಾಸದಲ್ಲಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಪಂಚಮಸಾಲಿ ಸಮುದಾಯದ ಮುಖಂಡರ ಜೊತೆ ಮಾತುಕತೆಗೆ ನಡೆದಿದೆ.ಈ ಮೂಲಕ ಮೀಸಲಾತಿಗೆ ಸಂಬಂಧಿಸಿದ ಹೋರಾಟಕ್ಕೆ ಅಲ್ಪವಿರಾಮ ಬೀಳುವ ನಿರೀಕ್ಷೆಯಿದೆ. ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವ ಬಗ್ಗೆ ಸ್ಪಷ್ಟಉತ್ತರ ನೀಡಬೇಕು. ಇಲ್ಲದಿದ್ದರೆ ಜೂನ್‌ 27 ರಂದು ಸಿಎಂ ಬೊಮ್ಮಾಯಿ ಅವರ ಶಿಗ್ಗಾವಿ ಮತ್ತು ಬೆಂಗಳೂರಿನ ನಿವಾಸದ ಮುಂದೆ ಧರಣಿ ನಡೆಸುವುದಾಗಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸ್ವಾಮೀಜಿಗಳು ಎಚ್ಚರಿಸಿದ್ದಾರೆ. 

Video Top Stories