ರಾಜ್ಯ ರಾಜಕಾರಣದಲ್ಲಿ ಸ್ಫೋಟಕ ಟ್ವಿಸ್ಟ್: ರಾಜಕೀಯದ ದಿಕ್ಕು ಬದಲಿಸುತ್ತಾ ಈ ಸುದ್ದಿ?
ರಾಜಕಾರಣದಲ್ಲಿ ಮತ್ತೊಂದು ರೋಚಕ ಟ್ವಿಸ್ಟ್ ಲಭ್ಯವಾಗುತ್ತಿದೆ. ಈ ಸುದ್ದಿ ವಿಧಾನಸಭಾ ಚುನಾವಣೆಯ ರಾಜ್ಯ ರಾಜಕಾರಣವನ್ನೇ ಬದಲಿಸುತ್ತದೆಯೇ ಎಂಬ ಅನುಮಾನ ಕಾಡುತ್ತಿದೆ. ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅವರ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೂ ಕ್ಷೇತ್ರ ಬದಲಾವಣೆ ಮಾಡುತ್ತಿದ್ದಾರೆ.
ಬೆಂಗಳೂರು (ಜ.21): ರಾಜಕಾರಣದಲ್ಲಿ ಮತ್ತೊಂದು ರೋಚಕ ಟ್ವಿಸ್ಟ್ ಲಭ್ಯವಾಗುತ್ತಿದೆ. ಈ ಸುದ್ದಿ ವಿಧಾನಸಭಾ ಚುನಾವಣೆಯ ರಾಜ್ಯ ರಾಜಕಾರಣವನ್ನೇ ಬದಲಿಸುತ್ತದೆಯೇ ಎಂಬ ಅನುಮಾನ ಕಾಡುತ್ತಿದೆ. ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅವರ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೂ ಕ್ಷೇತ್ರ ಬದಲಾವಣೆ ಮಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಸಹೋದರನ ಮಗ ಗುರುಚರಣ್ ಅವರು ಮದ್ದೂರಿನ ಕಾಂಗ್ರೆಸ್ ಅಭ್ಯರ್ಥಿ ಎಂದು ಕೇಳಿಬಂದಿತ್ತು. ಆದರೆ, ಸ್ವತಃ ಗುರುಚರಣ್ ಅವರೇ ಬೆಂಗಳೂರಿನ ಡಿ.ಕೆ.ಶಿವಕುಮಾರ್ ಅವರ ಮನೆಗೆ ತೆರಳಿ ಮದ್ದೂರಿನಲ್ಲಿ ಸ್ಪರ್ಧೆ ಮಾಡುವಂತೆ ಮನವಿ ಮಾಡಿದ್ದಾರೆ. ಈ ಮನವಿಗೆ ಡಿ.ಕೆ. ಶಿವಕುಮಾರ್ ಧನಾತ್ಮಕವಾಗಿ ಸ್ಪಂದನೆ ಮಾಡಿದ್ದು, ಈ ಬಗ್ಗೆ ಚಿಂತನೆ ಮಾಡಿ ಶಿಘ್ರವೇ ತಿಳಿಸುವುದಾಗಿ ಹೇಳಿದ್ದಾರೆ. ಒಂದು ವೇಳೆ ಡಿಕೆಶಿ ಕೂಡ ಕ್ಷೇತ್ರ ಬದಲಾವಣೆ ಮಾಡುವುದು ಸನ್ನಿಹಿತವಾದಲ್ಲಿ ಈಗಿನ ಅವರ ತವರು ಕ್ಷೇತ್ರ ಕನಕಪುರವನ್ನು ಬಿಟ್ಟು ಮದ್ದೂರಿನಿಂದ ಸ್ಪರ್ಧೆ ಮಾಡಲಿದ್ದಾರೆಯೇ.? ಎಂಬ ಅನುಮಾನ ಕಾಡುತ್ತಿದೆ.