Asianet Suvarna News Asianet Suvarna News

ಕುಟುಂಬ ರಾಜಕಾರಣಕ್ಕೆ ಕಾಂಗ್ರೆಸ್ ಮಣೆ, ಕಣದಲ್ಲಿ ಅಪ್ಪ- ಮಕ್ಕಳ ದರ್ಬಾರ್‌..!

ಮೊದಲ ಪಟ್ಟಿಯಲ್ಲಿ  ಕುಟುಂಬ ರಾಜಕಾರಣಕ್ಕೆ ಕಾಂಗ್ರೆಸ್‌ ಮಣೆ ಹಾಕಿದ್ದು, 4 ಕುಟುಂಬಗಳಿಗೆ  ತಲಾ ಎರಡು ಟಿಕೆಟ್‌ ಬಿಡುಗಡೆ ಮಾಡಿದೆ. 

ರಾಜ್ಯ ವಿಧಾನಸಭೆ ಚುನಾವಣೆಗೆ ಅಖಾಡ ಸಜ್ಜಾಗುತ್ತಿದ್ದು,  ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ. ಇನ್ನು ಮೊದಲ ಪಟ್ಟಿಯಲ್ಲಿ  ಕುಟುಂಬ ರಾಜಕಾರಣಕ್ಕೆ ಕಾಂಗ್ರೆಸ್‌ ಮಣೆ ಹಾಕಿದ್ದು, 4 ಕುಟುಂಬಗಳಿಗೆ  ತಲಾ ಎರಡು ಟಿಕೆಟ್‌ ಬಿಡುಗಡೆ ಮಾಡಿದೆ. ಬೆಂಗಳೂರಿನ ವಿಜಯನಗರದಿಂದ ಎಂ.ಕೃಷ್ಣಪ್ಪ , ಅವರ ಪುತ್ರ ಪ್ರಿಯಾ ಕೃಷ್ಣಗೆ ಗೋವಿಂದರಾಜನಗರ ಟಿಕೆಟ್ ಕಣಕ್ಕಿಳಿಯಲಿದ್ದಾರೆ .ಇನ್ನೂ ಬಿಟಿಎಂ ಲೇಔಟ್ ನಿಂದ ರಾಮಲಿಂಗಾ ರೆಡ್ಡಿ ಕಣಕ್ಕಿಳಿಯಲಿದ್ದು, ಅವರ ಪುತ್ರಿ ಸೌಮ್ಯಾ ರೆಡ್ಡಿ ಜಯನಗರದಿಂದ ಘೋಷಿಸಲಾಗಿದೆ .  ದಾವಣಗೆರೆ ದಕ್ಷಿಣದಿಂದ ಶಾಮನೂರ ಶಿವಶಂಕರಪ್ಪ ಹಾಗೂ ಅವರ ಪುತ್ರ ಎಸ್ ಎಸ್ ಮಲ್ಲಿಕಾರ್ಜುನ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದು,  ವಿಧಾನಸಭೆ ಚುನಾವಣೆಯಲ್ಲಿ ತಂದೆ- ಮಕ್ಕಳು ತಮ್ಮ ಅದೃಷ್ಟ ಪರೀಕ್ಷಿಸಿಲಿದ್ದಾರೆ.