Exit Poll: ಮಧ್ಯಪ್ರದೇಶದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ನೀಡಿದ ಸಮೀಕ್ಷೆ!

ಐದು ರಾಜ್ಯಗಳ ಚುನಾವಣೆಯಲ್ಲಿ ಬಹಳ ಪ್ರಮುಖ ರಾಜ್ಯಗಳಾಗಿರುವ ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಸಿಎನ್‌ಎನ್‌ ಹಾಗೂ ರಿಪಬ್ಲಿಕ್‌ ಸಮೀಕ್ಷೆ ಭವಿಷ್ಯ ನುಡಿದಿದೆ.

Share this Video
  • FB
  • Linkdin
  • Whatsapp

ಬೆಂಗಳೂರು (ನ.30): ಪಂಚ ರಾಜ್ಯಗಳ ಚುನಾವಣೆಯಲ್ಲಿ ಅತ್ಯಂತ ಮಹತ್ವದ ಎರಡು ರಾಜ್ಯಗಳಾಗಿರುವ ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಬಿಜೆಪಿ ಮುನ್ನಡೆ ಸಾಧಿಸಲಿದೆ ಎಂದು ಸಿಎನ್‌ಎನ್‌ ಹಾಗೂ ರಿಪಬ್ಲಿಕ್‌ ಟಿವಿ ಎಕ್ಸಿಟ್‌ ಪೋಲ್‌ ಭವಿಷ್ಯ ನುಡಿದಿದೆ.

ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲುವಿನ ಕಹಳೆ ಎಂದ ಎಕ್ಸಿಟ್‌ ಪೋಲ್‌!

ಸಿಎನ್‌ಎನ್‌ ಪ್ರಕಾರ ರಾಜಸ್ಥಾನದಲ್ಲಿ 111 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದರೆ, ಕಾಂಗ್ರೆಸ್‌ 74 ಹಾಗೂ ಇತರರು 14 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬಹುದು ಎಂದಿದೆ. 101 ರಾಜಸ್ಥಾನದ ಮ್ಯಾಜಿಕ್‌ ನಂಬರ್‌ ಆಗಿದೆ. ಇನ್ನು ತೆಲಂಗಾಣದಲ್ಲಿ ಅತಂತ್ರ ವಿಧಾನಸಭೆ ಆಗಲಿದೆ ಎಂದು ಸಿಎನ್‌ಎನ್‌ ಭವಿಷ್ಯ ನುಡಿದಿದ್ದರೆ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಸರಳ ಬಹುಮತದೊಂದಿಗೆ ಗೆಲುವು ಸಾಧಿಸಲಿದೆ ಎಂದು ತಿಳಿಸಿದೆ.

Related Video