ಹಿಂದೂ-ಮುಸ್ಲಿಮರು ಸಹೋದರರಂತೆ ಬಾಳಬೇಕು ಎಂದ ಬಿಎಸ್‌ವೈ
ರಾಜ್ಯದ ಸಾಮರಸ್ಯ ಕದಡುವ ಪ್ರಯತ್ನವನ್ನು ಯಾರೂ ಮಾಡಬೇಡಿ. ಒಂದೇ ತಾಯಿಯ ಮಕ್ಕಳಂತೆ ಹಿಂದು-ಮುಸ್ಲಿಂ ಸಮುದಾಯಗಳು ಬಾಳಬೇಕು. ಕಿಡಿಗೇಡಿಗಳು ಸೌಹಾರ್ದತೆ ಕದಡುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕಿಡಿಕಾರಿದ್ದಾರೆ.
ಬೆಂಗಳೂರು (ಏ.11): ಹಿಂದು-ಮುಸ್ಲಿಮರು (Hindu and Muslim) ಸಹೋದರಂತೆ ಬಾಳಬೇಕು. ಕೆಲವು ಕಿಡಿಗೇಡಿಗಳಿಂದಾಗಿ ಸೌಹಾರ್ದತೆಯನ್ನು ಕದಡುವ ಕೆಲಸ ಆಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (Former Chief minister BS yediyurappa ) ಬೆಂಗೂಳೂರಿನಲ್ಲಿ ಹೇಳಿದ್ದಾರೆ.
ನಿಮ್ಮ ನಿಮ್ಮ ದಿನನಿತ್ಯದ ಕೆಲಸವನ್ನು ಮಾತ್ರ ಮಾಡಿಕೊಂಡು ಹೋಗಿ. ರಾಜ್ಯದ ಸಾಮರಸ್ಯವನ್ನು ಕದಡುವ ಪ್ರಯತ್ನಗಳನ್ನು ಮಾಡಬೇಡಿ ಎಂದು ಹೇಳುವ ಮೂಲಕ ಶಾಂತಿ ಕದಡುವ ವ್ಯಕ್ತಿಗಳಿಗೆ ಮಾಜಿ ಸಿಎಂ ಎಚ್ಚರಿಕೆ ನೀಡಿದ್ದಾರೆ.
Morning Express: ಏ.10ರಿಂದ ರಾಮರಥ ಯಾತ್ರೆ: ಸಿಎಂ ಬೊಮ್ಮಾಯಿ, ಬಿಎಸ್‌ವೈ ಚಾಲನೆ
ಈಗಾಗಲೇ ಆಗಿರುವ ಘಟನೆಗಳಲ್ಲಿ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಇನ್ನು ಮುಂದೆ ಇಂಥ ಅಹಿತಕರ ಘಟನೆಗಳು ನಡೆಯದಂತೆ ನಾವೆಲ್ಲರೂ ಒಟ್ಟಾಗಿ ಬಾಳುವಂಥ ಅವಕಾಶ ಕಲ್ಪಿಸಿಕೊಡಬೇಕು. ಸಾಮರಸ್ಯ ಕದಡುವ ಘಟನೆಗಳನ್ನು ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಹೇಳಿದ್ದಾರೆ.