Asianet Suvarna News Asianet Suvarna News

ಸಿದ್ದರಾಮಯ್ಯನವರ ವಿಶ್ವಾಸ ಗಳಿಸಿ, ಜನರ ಜೀವ ಉಳಿಸಿ: ಬಿಎಸ್‌ವೈ ಸರ್ಕಾರಕ್ಕೆ ಎಚ್‌ಡಿಕೆ ಸಲಹೆ

ಸರ್ಕಾರದ ವೈಫಲ್ಯದ ಬಗ್ಗೆ ಚರ್ಚಿಸುವುದು ಈಗ ಅನವಶ್ಯಕ. ಜನತೆಯ ಜೀವನವನ್ನು ರಕ್ಷಣೆ ಮಾಡುವಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮುಂದಾಗಲೀ, ಹಾಗೂ ಸಿದ್ದರಾಮಯ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಕೆಲಸವನ್ನು ಸರ್ಕಾರ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ಬೆಂಗಳೂರು, (ಜುಲೈ.09): ಸರ್ಕಾರದ ವೈಫಲ್ಯದ ಬಗ್ಗೆ ಚರ್ಚಿಸುವುದು ಈಗ ಅನವಶ್ಯಕ. ಜನತೆಯ ಜೀವನವನ್ನು ರಕ್ಷಣೆ ಮಾಡುವಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮುಂದಾಗಲೀ, ಹಾಗೂ ಸಿದ್ದರಾಮಯ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಕೆಲಸವನ್ನು ಸರ್ಕಾರ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ವೀಡಿಯೋ ಮೂಲಕ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರದ ಮೇಲೆ ಹಣದ ದುರುಪಯೋಗವಾಗುತ್ತಿದೆ ಎಂಬ ಆರೋಪ ಮತ್ತೆ ಕೇಳಿಬರದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಸಹ ವಿಶ್ವಾಸಕ್ಕೆ ತೆಗೆದುಕೊಂಡು, ಕೋವಿಡ್ ಕಾರ್ಯಪಡೆಯಲ್ಲಿ ಹಾಗೂ ಪ್ರತಿನಿತ್ಯ ಸರ್ಕಾರ ಕೋವಿಡ್ ಗಾಗಿ ನಡೆಸುವ ಸಭೆಗಳಿಗೆ ಸಿದ್ದರಾಮಯ್ಯ ಸೇರಿದಂತೆ ವಿಪಕ್ಷಗಳ ನಾಯಕರನ್ನು ಆಹ್ವಾನಿಸಬೇಕು ಎಂದು ಆಗ್ರಹಿಸಿದ್ದಾರೆ.

Video Top Stories