ಹೊಸ ದಾಖಲೆ ಬರೆದ ದಳಪತಿ: 'ಏಷ್ಯಾ ಬುಕ್ ಆಫ್ ರೆಕಾರ್ಡ್ಸ್' ದಾಖಲೆಗೆ ಪಾತ್ರರಾದ ಹೆಚ್.ಡಿ.ಕೆ

ರಾಜ್ಯಾದ್ಯಂತ ಪಂಚರತ್ನ ರಥಯಾತ್ರೆ ಕೈಗೊಂಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಹೊಸ ದಾಖಲೆಗೆ ಪಾತ್ರರಾಗಿದ್ದಾರೆ. 

Share this Video
  • FB
  • Linkdin
  • Whatsapp

ಪಂಚರತ್ನ ರಥಯಾತ್ರೆಯಲ್ಲಿ ರಾಜ್ಯದ ಜನರು ವಿವಿಧ ಬಗೆಯ ಬೃಹತ್ ಹಾರಗಳನ್ನು ಹಾಕಿ ಗೌರವಿಸಿದ ಹಿನ್ನೆಲೆಯಲ್ಲಿ ಹೆಚ್.ಡಿ.ಕೆ 'ಏಷ್ಯಾ ಬುಕ್ ಆಫ್ ರೆಕಾರ್ಡ್ಸ್' ಹಾಗೂ 'ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ 'ದಾಖಲೆಗೆ ಪಾತ್ರರಾಗಿದ್ದಾರೆ. ತುಮಕೂರು ಗ್ರಾಮಾಂತರ ಕ್ಷೇತ್ರದ ಯಲ್ಲಾಪುರದಲ್ಲಿ 'ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ' ತೀರ್ಪುಗಾರರಾದ ಮೋಹಿತ್ ಕುಮಾರ್ ವತ್ಸ ಹಾಗೂ 'ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ' ತೀರ್ಪುಗಾರರಾದ ಆರ್. ಹರೀಶ್ ಅವರು ಕುಮಾರಸ್ವಾಮಿಗೆ ಎರಡೂ ದಾಖಲೆಗಳ ಪತ್ರಗಳು ಮತ್ತು ಮೆಡಲ್ ಗಳನ್ನು ಹಸ್ತಾಂತರ ಮಾಡಿದ್ದರು.

Related Video