ನಮಗೆ ಅಂಥಾ ತಮ್ಮ ಇಲ್ಲ, ನಾನು ಅವರ ಅಣ್ಣ ಆಗಲು ಸಾಧ್ಯವಿಲ್ಲ: ಎಚ್‌.ಡಿ.ಕುಮಾರಸ್ವಾಮಿ

ಬಿಬಿಎಂಪಿಯಲ್ಲಿ ಕಾಮಗಾರಿ ಮಾಡಿದ ಗುತ್ತಿಗೆದಾರರಿಗೆ ಹಣವನ್ನು ಬಿಡುಗಡೆ ಮಾಡದಂತೆ ಕಾಂಗ್ರೆಸ್‌ ಸಂಸದರೊಬ್ಬರು ತಡೆಯೊಡ್ಡಿದ್ದರು. ಈಗ ಕಮೀಷನ್‌ ದರವನ್ನು ನಿಗದಿ ಮಾಡಿ 710 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

First Published Aug 5, 2023, 5:03 PM IST | Last Updated Aug 5, 2023, 5:14 PM IST

ಬೆಂಗಳೂರು (ಆ.05): ಬಿಬಿಎಂಪಿಯಲ್ಲಿ ಕಾಮಗಾರಿ ಮಾಡಿದ ಗುತ್ತಿಗೆದಾರರಿಗೆ ಹಣವನ್ನು ಬಿಡುಗಡೆ ಮಾಡದಂತೆ ಕಾಂಗ್ರೆಸ್‌ ಸಂಸದರೊಬ್ಬರು ತಡೆಯೊಡ್ಡಿದ್ದರು. ಈಗ ಕಮೀಷನ್‌ ದರವನ್ನು ನಿಗದಿ ಮಾಡಿ 710 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ಕಾರ್ಪೋರೇಷನ್ (ಬಿಬಿಎಂಪಿ) ಕಚೇರಿಯಲ್ಲಿ ಏನು ನಡೀತು? 710 ಕೋಟಿ ರೂ. ಬಿಡುಗಡೆ ಆಗಿರಬೇಕಲ್ಲ. ಅದಕ್ಕೆ ‌ 26 ಅಂಶಗಳ ಮೇಲೆ ತನಿಖೆ ಮಾಡ್ತಾರಂತೆ. ಅಣ್ಣ ಹೇಳ್ತಾರೆ, ತಮ್ಮ ಕೇಳ್ಬೇಕು ಅಂತಾ ಅದೇನೋ ಡಿ.ಕೆ.ಶಿವಕುಮಾರ್ ಹೇಳಿದ್ದಾರಲ್ಲ. ಈ ಜನ್ಮದಲ್ಲೂ ಅಂತೂ, ಅಂತಹ ತಮ್ಮ ನನಗೆ ಬೇಡ. ಮುಂದಿನ ಜನ್ಮದಲ್ಲೂ ಅವರು ನನಗೂ ತಮ್ಮ ಆಗೋದೂ ಬೇಡ ಎಂದು ಕಾಂಗ್ರೆಸ್‌ ಸರ್ಕಾರಕ್ಕೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವಿರುದ್ಧ ತಿರುಗೇಟು ನೀಡಿದ್ದಾರೆ.