ಕರ್ನಾಟಕ ಚುನಾವಣೆ ಮೇಲೆ ಕಣ್ಣಿಟ್ಟು ಅನುದಾನ ಘೋಷಣೆ: ಕುಮಾರಸ್ವಾಮಿ

ಬಜೆಟ್ ಮೂಲಕ ಕೇಂದ್ರ ಸರ್ಕಾರದಿಂದ ಮೂಗಿಗೆ ತುಪ್ಪ ಸವರುವ ಕೆಲಸ ಆಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.
 

Share this Video
  • FB
  • Linkdin
  • Whatsapp

ಚುನಾವಣೆಯಲ್ಲಿ ಜನರನ್ನು ಮರಳು ಮಾಡಲು ಅನುದಾನ ಘೋಷಣೆ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಕರ್ನಾಟಕ ಚುನಾವಣೆ ಮೇಲೆ ಕಣ್ಣಿಟ್ಟು ಅನುದಾನ ಘೋಷಣೆ ಮಾಡಲಾಗಿದೆ. ಬಜೆಟ್‌ ಘೋಷಣೆ ಏಪ್ರಿಲ್‌ನಲ್ಲಿ ಜಾರಿಗೆ ಬರಲಿದೆ, ಅದು ಚುನಾವಣಾ ಪ್ರಚಾರಕ್ಕೆ ಬಳಕೆ ಆಗುತ್ತಿದೆ ಎಂದರು. ರಾಜ್ಯದಲ್ಲಿ ರೈಲ್ವೆ ಯೋಜನೆಗಳು ನೆನೆಗುದ್ದಿಗೆ ಬಿದ್ದಿವೆ. ಈ ಘೋಷಣೆ ಕೇವಲ ಕಾಗದದಲ್ಲಿ ಮಾತ್ರ ಇರಲಿದೆ ಎಂದು ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಕೇಂದ್ರ ಬಜೆಟ್‌ನಿಂದ ಬರಗಾಲ ಪೀಡಿತ ಪ್ರದೇಶ ಅಭಿವೃದ್ಧಿಗೆ ಅನುಕೂಲ: ಸಿಎಂ ಬೊಮ್ಮಾಯಿ

Related Video