Asianet Suvarna News Asianet Suvarna News

ಸುಪ್ರೀಂ ತೀರ್ಪು ಪ್ರಶ್ನಿಸಿ ಅರ್ಜಿ ಸಲ್ಲಿಸೋ ಅಗತ್ಯ ಇಲ್ಲ ಎಂದ್ರು ಸಿದ್ದು..!

ಸುಪ್ರೀಂ ಕೋರ್ಟ್ ತೀರ್ಪನ್ನು ನಾನು ಸ್ವಾಗತ ಮಾಡುತ್ತೇನೆ. ತೀರ್ಪು ಪ್ರಶ್ನಿಸಿ ಅರ್ಜಿ ಸಲ್ಲಿಸುವ ಬಗ್ಗೆ ಚರ್ಚೆ ನಡೆಯಲಿದೆ. ಆದರೆ ನನ್ನ ವೈಯಕ್ತಿಕ ಅಭಿಪ್ರಾಯದ ಪ್ರಕಾರ ತೀರ್ಪು ಪ್ರಶ್ನಿಸಿ ಅರ್ಜಿ ಸಲ್ಲಿಸೋ ಅಗತ್ಯ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು(ನ.13): ಸುಪ್ರೀಂ ಕೋರ್ಟ್ ತೀರ್ಪನ್ನು ನಾನು ಸ್ವಾಗತ ಮಾಡುತ್ತೇನೆ. ತೀರ್ಪು ಪ್ರಶ್ನಿಸಿ ಅರ್ಜಿ ಸಲ್ಲಿಸುವ ಬಗ್ಗೆ ಚರ್ಚೆ ನಡೆಯಲಿದೆ. ಆದರೆ ನನ್ನ ವೈಯಕ್ತಿಕ ಅಭಿಪ್ರಾಯದ ಪ್ರಕಾರ ತೀರ್ಪು ಪ್ರಶ್ನಿಸಿ ಅರ್ಜಿ ಸಲ್ಲಿಸೋ ಅಗತ್ಯ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಉಪಚುನಾವಣೆಯಲ್ಲಿ ಅನರ್ಹಶಾಸಕರ ಸ್ಪರ್ಧೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.

ಯಡಿಯೂರಪ್ಪ ಸರ್ಕಾರ ಸೇಫ್: ಬಿಜೆಪಿಯಿಂದ ಸ್ಪರ್ಧಿಸುತ್ತೇನೆ ಎಂದ ಅನರ್ಹ ಶಾಸಕ

ಸ್ಪೀಕರ್ ಮಾಡಿದ ಆದೇಶವನ್ನು ಭಾಗಶಃ ಎತ್ತಿಹಿಡಿಯಲಾಗಿದೆ. ಸುಪ್ರೀಂ ಕೋರ್ಟ್ ತೀರ್ಪನ್ನು ನಾನು ಸ್ವಾಗತ ಮಾಡುತ್ತೇನೆ. ವಿಪ್ ಉಲ್ಲಂಘಿಸಿದ ಶಾಸಕರ ವಿರುದ್ಧ ಅರ್ಜಿ ಹಾಕಿದ್ದೆವು. ಅದನ್ನು ಸ್ಪೀಕರ್ ವಿಚಾರಣೆ ನಡೆಸಿ, ವಿಶ್ಲೇಷಣೆ ಮಾಡಿ 17 ಶಾಸಕರನ್ನೂ ಅನರ್ಹರು ಎಂದು ಆದೇಶ ನೀಡಿದ್ರು. ಈಗ ಬಂದಿರುವ ತೀರ್ಪನ್ನು ಪ್ರಶ್ನೆ ಮಾಡೋ ಬಗ್ಗೆ ಪಕ್ಷದಲ್ಲಿ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳಲಿದ್ದೇವೆ. ನನ್ನ ಪ್ರಕಾರ ಅರ್ಜಿ ಸಲ್ಲಿಸುವ ಅಗತ್ಯ ಇಲ್ಲ. ಬಿಜೆಪಿ ಪ್ರತಿಪಕ್ಷದಲ್ಲಿದ್ದಾಗ ಒಂದುರೀತಿ, ಆಡಳಿತದಲ್ಲಿದ್ದಾಗ ಒಂದು ರೀತಿ ವರ್ತಿಸ್ತಾರೆ ಎಂದು ಕೋರ್ಟ್ ಹೇಳಿದೆ. ಇದು ಬಿಜೆಪಿಗೆ ಹಿನ್ನಡೆ ಅಲ್ವಾ..? ಕೊನೆಗೆ ಜನರ ಆದೇಶವೇ ಪ್ರಮುಖ ಆಗಿಬಿಡುತ್ತದೆ. ನೈತಿಕತೆ ಬಗ್ಗೆಯೇ ಚರ್ಚೆಯಾಗುತ್ತದೆ. ನಾನು ಸುಪ್ರೀಂ ಕೋರ್ಟ್ ತೀರ್ಪನ್ನು ಸಂಪೂರ್ಣವಾಗಿ ಸ್ವಾಗತಿಸುತ್ತೇನೆ ಎಂದಿದ್ದಾರೆ. ಇನ್ನು ಉಪಚುನಾವಣೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹಿರಿಯ ನಾಯಕರ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದೇವೆ. ಏಳು ಕ್ಷೇತ್ರಗಳಲ್ಲಿಯೂ ಅಧ್ಯಕ್ಷರ ಅಭಿಪ್ರಾಯ ತೆಗೆದುಕೊಂಡಿದ್ದೇವೆ. ಇನ್ನು ಕೆಲವು ದಿನಗಳಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

Video Top Stories