Asianet Suvarna News Asianet Suvarna News

ಕಾಂಗ್ರೆಸ್‌ ಗಾಳಿ ನಮ್ಮ ಮೇಲೂ ಬಿದ್ದಿದೆ, ಹಾಗಾಗಿ ಬಿಜೆಪಿಯಲ್ಲಿ ಶಿಸ್ತು ಕಡಿಮೆಯಾಗಿದೆ: ಈಶ್ವರಪ್ಪ

ಕಾಂಗ್ರೆಸ್‌ ಗಾಳಿ ನಮ್ಮ ಮೇಲೂ ಬಿದ್ದಿದೆ. ಬಿಜೆಪಿಯಲ್ಲಿ ಶಿಸ್ತು ಕಡಿಮೆಯಾಗಿದೆ ಎಂದು ಕೆ.ಎಸ್‌.ಈಶ್ವರಪ್ಪ ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ.
 

First Published Jun 26, 2023, 2:25 PM IST | Last Updated Jun 26, 2023, 2:25 PM IST

ಹುಬ್ಬಳ್ಳಿ: ಕಾಂಗ್ರೆಸ್‌ ಗಾಳಿ ನಮ್ಮ ಮೇಲೂ ಬಿದ್ದಿದೆ. ಕಾಂಗ್ರೆಸ್ ನಾಯಕರನ್ನು ಕರೆದುಕೊಂಡು ಬಂದು ಅನುಭವಿಸುತ್ತಿದ್ದೇವೆ. ಬಿಜೆಪಿಯಲ್ಲಿ ಸ್ವಲ್ಪ ಶಿಸ್ತು ಕಡಿಮೆಯಾಗಿದೆ. ಮುಂದೆ ಅಶಿಸ್ತು ತೋರುವವರ ಬಾಲ ಕಟ್‌ ಮಾಡಲಾಗುವುದು ಎಂದು ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದ್ದಾರೆ. ಹೊಂದಾಣಿಕೆ ರಾಜಕೀಯದ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವುದು ದುರ್ದೈವ ಎಂದು ಇದೇ ವೇಳೆ ಹೇಳಿದರು.ಇಂತಹದ್ದನ್ನೆಲ್ಲಾ ನಾಲ್ಕು ಗೋಡೆ ಮಧ್ಯೆ ಕೂತು ಮಾತನಾಡಬೇಕು. ಬಹಿರಂಗ ಹೇಳಿಕೆ ಕೊಡುವ ಬಗ್ಗೆ ಪಕ್ಷದ ನಾಯಕರೊಂದಿಗೆ ನಾನು ಮಾತನಾಡುತ್ತೇನೆ. ಕಾಂಗ್ರೆಸ್ ನಾಯಕರು ಬಂದ ಮೇಲೆ ಬಿಜೆಪಿಯಲ್ಲಿ ಶಿಸ್ತು ಹೋಗಿದೆ ಎಂದು ಈಶ್ವರಪ್ಪ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಸ್ವಂತ ಏರ್ ಜೆಟ್ ಹೊಂದಿದ್ದಾರೆ ಬಿಗ್‌ ಬಿ ಅಮಿತಾಬ್: ಯಾವ ಹೀರೋ ಪ್ರೈವೇಟ್ ಜೆಟ್ ಇಟ್ಟಿದ್ದಾರೆ ಗೊತ್ತಾ?