ಶಾಸಕ ತಿಪ್ಪಾರೆಡ್ಡಿ ವಿರುದ್ಧ ಭ್ರಷ್ಟಾಚಾರ ಆರೋಪ: ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ ರಘು ಆಚಾರ್‌

ಚಿತ್ರದುರ್ಗದಲ್ಲಿ ನಡೆದಿರುವ ಕಾಮಗಾರಿಗಳ ಬಗ್ಗೆ ವಿಶೇಷ ತನಿಖೆ ಆಗಬೇಕೆಂದು ಮಾಜಿ ವಿಧಾನ ಪರಿಷತ್ ಸದಸ್ಯ ರಘು ಆಚಾರ್ ಆಗ್ರಹಿಸಿದ್ದಾರೆ.

Share this Video
  • FB
  • Linkdin
  • Whatsapp

ಶಾಸಕ ತಿಪ್ಪಾರೆಡ್ಡಿ ವಿರುದ್ಧ ರಘು ಆಚಾರ್‌ ಭ್ರಷ್ಟಾಚಾರ ಆರೋಪ ಮಾಡಿದ್ದು, ಗ್ರಾಮಗಳ ಭೇಟಿ ವೇಳೆ ಜನ ಕಮಿಷನ್ ಬಗ್ಗೆ ಆರೋಪ ಮಾಡ್ತಾರೆ ಎಂದು ತಿಳಿಸಿದ್ದಾರೆ. ಶೇ. 25 ರಿಂದ 40ರಷ್ಟು ಕಮಿಷನ್‌ ಆರೋಪಿಸಿದ ರಘು ಆಚಾರ್‌, ರಸ್ತೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸಿಲ್ಲ ಎಂದು ಹೇಳಿದ್ದಾರೆ‌. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವಂತೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು, ಲೋಕಾಯುಕ್ತ ತನಿಖೆಗೆ ರಘು ಆಚಾರ್‌ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಭ್ರಷ್ಟಾಚಾರದ ದಾಖಲೆಗಳು ಇವೆ. ಸರ್ಕಾರ ಲೋಕಾಯುಕ್ತ ತನಿಖೆ ನಡೆಸಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕದಿದ್ದರೆ ಮುಂದಿನ ದಿನಗಳಲ್ಲಿ ಅವೆಲ್ಲವನ್ನು ಜನರ ಮನೆ ಬಾಗಿಲಿಗೆ ತಲುಪಿಸುತ್ತೇನೆ ಎಂದು ಎಚ್ಚರಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪ್ರಧಾನಿ ಮೋದಿ ನೇತೃತ್ವದಲ್ಲಿ ಹೈವೋಲ್ಟೇಜ್‌ ಸಭೆ: ಕರ್ನಾಟಕದ ಬಗ್ಗೆ ಮಹ ...

Related Video