ಕಾಂಗ್ರೆಸ್‌ ಸೇರಿದ ಗೀತಾ ಶಿವರಾಜ್‌ ಕುಮಾರ್‌: ಸಹೋದರನ ಪರ ಸೊರಬದಲ್ಲಿ ಪ್ರಚಾರ

ಗೀತಾ ಶಿವರಾಜ್ ಕುಮಾರ್ ಮಾಜಿ ಸಿಎಂ ದಿವಂಗತ ಬಂಗಾರಪ್ಪ ಅವರ ಪುತ್ರಿಯಾಗಿದ್ದಾರೆ. ಅವರು ಇಂದು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು: ನಟ ಶಿವರಾಜ್‌ ಕುಮಾರ್‌ ಪತ್ನಿ ಗೀತಾ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಗೀತಾ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದು, ಸಹೋದರ ಮಧು ಬಂಗಾರಪ್ಪ ಸಹ ಈ ವೇಳೆ ಉಪಸ್ಥಿತರಿದ್ದರು. ನಾಳೆಯಿಂದ ಸೊರಬದಲ್ಲಿ ಗೀತಾ ಶಿವರಾಜ್‌ ಕುಮಾರ್‌ ಕಾಂಗ್ರೆಸ್‌ ಪರ ಪ್ರಚಾರ ಮಾಡಲಿದ್ದಾರೆ. ಇದಕ್ಕೆ ನಟ ಶಿವರಾಜ್‌ ಕುಮಾರ್‌ ಸಹ ಬೆಂಬಲ ವ್ಯಕ್ತಪಡಿಸಿದ್ದಾರೆ. ಸೊರಬದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಇದ್ದರೇ, ಬಿಜೆಪಿ ಅಭ್ಯರ್ಥಿಯಾಗಿ ಅವರ ಸಹೋದರ ಕುಮಾರ್‌ ಬಂಗಾರಪ್ಪ ಸ್ಪರ್ಧಿಸಿದ್ದಾರೆ. ಇದೀಗ ಕಿರಿಯ ಸಹೋದರನನ್ನು ಬೆಂಬಲಿಸುವುದಕ್ಕಾಗಿ ಗೀತಾ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ವೀಕ್ಷಿಸಿ: ಮುಂದುವರೆದ 'ವಿಷಸರ್ಪ' ವಾರ್‌: ವಿಷಕಾರುವುದು ಬಿಜೆಪಿ ಹುಟ್ಟುಗುಣವೆಂದ ಬಿ.ಕೆ. ಹರಿಪ್ರಸಾದ್‌

Related Video