Asianet Suvarna News Asianet Suvarna News

FIR ದಾಖಲಿಸಿದ್ದಕ್ಕೆ ಸಿದ್ದರಾಮಯ್ಯ ಆಕ್ರೋಶ, ಸರ್ಕಾರಕ್ಕೊಂದು ಸವಾಲು

ಕರ್ಫ್ಯೂ ಉಲ್ಲಂಘಿಸಿ ಮೇಕೆದಾಟು ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಮಾಡುತ್ತಿದ್ದು, ಎಫ್‌ಐಆರ್‌ ದಾಖಲಾಗಿದೆ. ಇದರಿಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶಗೊಂಡಿದ್ದಾರೆ.

ರಾಮನಗರ, (ಜ.11):  ಕರ್ಫ್ಯೂ ಉಲ್ಲಂಘಿಸಿ ಮೇಕೆದಾಟು ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಮಾಡುತ್ತಿದ್ದು, ಎಫ್‌ಐಆರ್‌ ದಾಖಲಾಗಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅದ್ಯಕ್ಷ ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಜಿ. ಪರಮೇಶ್ವರ್ ಸೇರಿದಂತೆ 30 ಜನರ ಮೇಲೆ ರಾಮನಗರ ಪೊಲೀಸರು ಸೋಮವಾರ ಎಫ್‍ಐಆರ್ ದಾಖಲಿಸಿದ್ದಾರೆ.

Mekedatu Padayatre: ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಸೇರಿ 30 ಜನರ ವಿರುದ್ಧ ಎಫ್‍ಐಆರ್

ಇದರಿಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶಗೊಂಡಿದ್ದು, ಕೇಸ್ ಹಾಕಿದರೆಲ್ಲ ನಾವು ಹೆದರಲ್ಲ. ಇನ್ನೂ ಹಾಕಬಹುದು ಎಂದು ಸವಾಲು ಹಾಕಿದ್ದಾರೆ.