ಲಾಕ್‌ಡೌನ್: ಆರ್ಥಿಕ ಪ್ಯಾಕೇಜ್ ಘೋಷಿಸುವಂತೆ ಡಿಕೆ ಶಿವಕುಮಾರ್ ಒತ್ತಾಯ
ಆರ್ಥಿಕವಾಗಿ ಸಂಕಷ್ಟದಲ್ಲಿರುವವರಿಗೆ ಪ್ಯಾಕೇಜ್ ಘೋಷಣೆ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ.
ಬೆಂಗಳೂರು, (ಮೇ.18): ಕರ್ನಾಟಕದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೇ.24ರ ಬಳಿಕೆವೂ ಲಾಕ್‌ಡೌನ್ ವಿಸ್ತರಣೆ ಮಾಡುವುದು ಬಹುತೇಕ ಖಚಿತವಾಗಿದೆ.
ಬಡವ, ಶ್ರಮಿಕರಿಗೆ ಸಿಗುತ್ತಾ ಗುಡ್‌ನ್ಯೂಸ್? ಕುತೂಹಲ ಮೂಡಿಸಿದ ಸಿಎಂ ಸುದ್ದಿಗೋಷ್ಠಿ
ಈ ಹಿನ್ನೆಲೆಯಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವವರಿಗೆ ಪ್ಯಾಕೇಜ್ ಘೋಷಣೆ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ.