ಮನೆ ಬಿಟ್ಬಂದು ಸಿದ್ದುಗೆ ಬೈದ ವಿಶ್ವನಾಥ್ ನಡೆ ವಿಶ್ಲೇಷಿಸಿದ ಬೈದನಮನೆ!

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹೆಚ್.ವಿಶ್ವನಾಥ್, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು(ಜೂ.04): ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹೆಚ್.ವಿಶ್ವನಾಥ್, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಮನ್ವಯ ಸಮಿತಿ ಸಿದ್ದರಾಮಯ್ಯ ಅವರ ಕೈಗೊಂಬೆಯಾಗಿದ್ದು, ಜೆಡಿಎಸ್ ಅಭಿಪ್ರಾಯಕ್ಕೆ ಯಾವುದೇ ಮಣೆ ಇಲ್ಲ ಎಂದು ವಿಶ್ವನಾಥ್ ಹರಿಹಾಯ್ದಿದ್ದಾರೆ. ತಮ್ಮನ್ನು ಮತ್ತು ದಿನೇಶ್ ಗುಂಡೂರಾವ್ ಅವರನ್ನು ಸಮನ್ವಯ ಸಮಿತಿಗೆ ಸೇರಿಸಿಕೊಳ್ಳದ ಸಿದ್ದರಾಮಯ್ಯ ನಡೆಯನ್ನು ವಿಶ್ವನಾಥ್ ಟೀಕಿಸಿದ್ದಾರೆ. ಇದೇ ವೇಳೆ ಮೈಸೂರು ಲೋಕಸಭಾ ಕ್ಷೇತ್ರದ ಟಿಕೆಟ್ ಜೆಡಿಎಸ್ ಗೆ ಸಿಗದಂತೆ ಸಿದ್ದರಾಮಯ್ಯ ತಂತ್ರ ರೂಪಿಸಿದರು ಎಂದು ವಿಶ್ವನಾಥ್ ಗಂಭೀರ ಆರೋಪ ಮಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

Related Video