ಶಿವಮೊಗ್ಗದಲ್ಲಿ ಶುರುವಾಗಿದ್ಯಾ ದ್ವೇಷ ರಾಜಕಾರಣ? : ಸರ್ಕಾರದ ಟಾರ್ಗೆಟ್ ಆದ್ರಾ ಬಿಜೆಪಿ ಕಾರ್ಯಕರ್ತರು !

ಶಿವಮೊಗ್ಗದಲ್ಲಿ ಕಾಂಗ್ರೆಸ್‌ನಿಂದ ದ್ವೇಷದ ರಾಜಕಾರಣ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
 

First Published Aug 5, 2023, 11:47 AM IST | Last Updated Aug 5, 2023, 11:47 AM IST

ಶಿವಮೊಗ್ಗ: ಸಚಿವ ಮಧುಬಂಗಾರಪ್ಪ ವಿರುದ್ಧ ಪ್ರತಿಭಟಿಸಿದ್ದ(Protest) ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೇ ಕಾಂಗ್ರೆಸ್‌ (Congress) ಸರ್ಕಾರ ಬಿಜೆಪಿ(BJP) ಮುಖಂಡರು, ಕಾರ್ಯಕರ್ತರನ್ನು ಟಾರ್ಗೆಟ್‌ ಮಾಡುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಸಚಿವರ ವಿರುದ್ಧ ಪ್ರತಿಭಟಿಸಿದ್ದ ಕಾರ್ಯಕರ್ತರ ವಿರುದ್ಧ ಕೇಸ್‌(Case) ಹಾಕಲಾಗಿದೆ. ಆದ್ರೆ ಕುವೆಂಪು ವಿವಿ ಘಟಿಕೋತ್ಸವದಲ್ಲಿ ಪ್ರತಿಭಟಿಸಿದ್ದ ಎನ್‌ಎಸ್‌ಯುಐ ಕಾರ್ಯಕರ್ತರನ್ನು ಮಾತ್ರ ಬಂಧಿಸಿಲ್ಲ. ಇನ್ನೂ ಕ್ರಮ ಕೈಗೊಳ್ಳುವಲ್ಲಿ ಪೊಲೀಸರು ತಾರತಮ್ಯ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಜು.26 ರಂದು ಸಚಿವ ಮಧುಬಂಗಾರಪ್ಪ ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿ, ಕಪ್ಪು ಪಟ್ಟಿ ಪ್ರದರ್ಶಿಸಿದ್ದರು. 

ಇದನ್ನೂ ವೀಕ್ಷಿಸಿ:  ಕೇರಳ ಪೊಲೀಸರಿಂದ ಕರ್ನಾಟಕ ಪೊಲೀಸರ ಬಂಧನ ಪ್ರಕರಣಕ್ಕೆ ಟ್ವಿಸ್ಟ್!

Video Top Stories