ಬಿಜೆಪಿಯಲ್ಲಿ ರಾಜೀನಾಮೆ ಪರ್ವ, ಶಾಸಕ ಸ್ಥಾನಕ್ಕೆ ನೆಹರು ಓಲೇಕಾರ್​ ರಾಜೀನಾಮೆ..!

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಬಿಜೆಪಿ ಪಟ್ಟಿ ಬಿಡುಗಡೆ ಆಗುತ್ತಿದ್ದಂತೆ ಸಾಲು ಸಾಲು ಶಾಸಕರು ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದಾರೆ. 
 

Share this Video
  • FB
  • Linkdin
  • Whatsapp

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಬಿಜೆಪಿ ಪಟ್ಟಿ ಬಿಡುಗಡೆ ಆಗುತ್ತಿದ್ದಂತೆ ಸಾಲು ಸಾಲು ಶಾಸಕರು ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದಾರೆ. ಈಗಾಗಲೇ ಹಲವು ಶಾಸಕರು ಬಿಜೆಪಿಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಸಿಎಂ ತವರು ಜಿಲ್ಲೆಯ ವಿಕೆಟ್ ಪತನವಾಗಿದೆ.ಹಾವೇರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ತೀವ್ರ ಅಸಮಾಧಾನಗೊಂಡಿರುವ ಬಿಜೆಪಿ ಶಾಸಕ ನೆಹರು ಓಲೇಕಾರ್​ ಇಂದು ಬಿಜೆಪಿ ಪಕ್ಷ ತೊರೆದು ಜೆಡಿಎಸ್ ಸೇರಲು ನಿರ್ಧರಿಸಿದ್ದಾರೆ.ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ನೆಹರು ಓಲೇಕಾರ್ ತಿಳಿಸಿದ್ದು,.ಶಿರಸಿಗೆ ತೆರಳಿ ಸ್ಪೀಕರ್ ಕಾಗೇರಿಗೆ ರಾಜೀನಾಮೆ ಪತ್ರ ಸಲ್ಲಿಸುವೆ. ನಂತರ ಬೆಂಗಳೂರಿಗೆ ತೆರಳಿ ಪಕ್ಷದ ಸದಸ್ಯತ್ವಕ್ಕೂ ರಾಜೀನಾಮೆ ನೀಡುತ್ತೇನೆ. ಇಂದು ಸಂಜೆ ಜೆಡಿಎಸ್‌ ಪಕ್ಷಕ್ಕೆ ಸೇರುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.


Related Video