Party Rounds: ಅಮಿತ್ ಶಾ ನಿವಾಸದಲ್ಲಿ ಎಚ್‌ಡಿಡಿ ಸಭೆ: ಜೆಡಿಎಸ್‌-ಬಿಜೆಪಿ ಮೈತ್ರಿಯ ಒಳಗುಟ್ಟು ಇದು!

ಲೋಕಸಭಾ ಚುನಾವಣೆ 2024ಕ್ಕೂ ಮುನ್ನ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೊಂದಿಗೆ ಜೆಡಿಎಸ್‌-ಬಿಜೆಪಿ ಮೈತ್ರಿ ಬಗ್ಗೆ ಚರ್ಚೆ ಮಾಡಿ ಒಪ್ಪಂದ ಮಾಡಿಕೊಂಡಿದ್ದಾರೆ. 

First Published Sep 7, 2023, 6:43 PM IST | Last Updated Sep 7, 2023, 6:43 PM IST

ಬೆಂಗಳೂರು (ಸೆ.07): ಲೋಕಸಭಾ ಚುನಾವಣೆ 2024ಕ್ಕೂ ಮುನ್ನ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೊಂದಿಗೆ ಜೆಡಿಎಸ್‌-ಬಿಜೆಪಿ ಮೈತ್ರಿ ಬಗ್ಗೆ ಚರ್ಚೆ ಮಾಡಿ ಒಪ್ಪಂದ ಮಾಡಿಕೊಂಡಿದ್ದಾರೆ. ಈ ಮೈತ್ರಿ ಯಶಸ್ವಿಯೂ ಆಗಿದ್ದು, ಕ್ಷೇತ್ರಗಳ ಹಂಚಿಕೆಯ ಒಪ್ಪಂದವನ್ನೂ ಮಾಡಿಕೊಳ್ಳಲಾಗಿದೆ. ಈ ಮೂಲಕ ಕರ್ನಾಟಕ ರಾಜ್ಯದ ರಾಜಕಾರಣದಲ್ಲಿ ಲೋಕಸಭಾ ಚುನಾವಣೆಗೂ ಮುನ್ನ ಹೊಸದೊಂದು ತಿರುವು ಕಂಡುಬರುತ್ತಿದೆ. ಇನ್ನು ಮೈತ್ರಿ ಕುರಿತಂತೆ ದೆಹಲಿಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸೆ.4ರಂದು ಸಂಜೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಮನೆಯಲ್ಲಿಯೇ ಬಿಜೆಪಿ-ಜೆಡಿಎಸ್‌ ಮೈತ್ರಿ ಬಗ್ಗೆ ಚರ್ಚೆ ಮಾಡಿದರು.ಏನಾಯ್ತು ಸಭೆಯಲ್ಲಿ? ಏನ್‌ ಚರ್ಚೆ ನಡೆಯಿತು? ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್...