Asianet Suvarna News Asianet Suvarna News

ಅಮಿತ್ ಶಾ ನಡೆ ಅನುಮಾನ ಮೂಡಿಸಿದೆ: ಚರ್ಚೆಗೆ ಗ್ರಾಸವಾಯ್ತು ಕುಮಾರಸ್ವಾಮಿ ಹೇಳಿಕೆ

ಬೆಳಗಾವಿ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಹೇಳಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಈ ಬಗ್ಗೆ ಕಠಿಣ ನಿರ್ಧಾರ ಕೈಗೊಳ್ಳಬೆಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದರು.

ಬೆಂಗಳೂರು, (ಜ.18): ಬೆಳಗಾವಿ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಹೇಳಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಈ ಬಗ್ಗೆ ಕಠಿಣ ನಿರ್ಧಾರ ಕೈಗೊಳ್ಳಬೆಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದರು.

ಕನ್ನಡಿಗರು ಶಾಂತಿಪ್ರಿಯರು ಹಾಗಂತ ನಮ್ಮ ತಾಳ್ಮೆ ಪರೀಕ್ಷಿಸಬೇಡಿ; ಠಾಕ್ರೆಗೆ ಸಿದ್ದು ಟಕ್ಕರ್

 ಇಂದು (ಸೋಮವಾರ) ಜೆ.ಪಿ. ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ಮುಖ್ಯಮಂತ್ರಿ ಹೇಳಿಕೆ ಪ್ರಜಾಪ್ರಭುತ್ವ ವ್ಯವಸ್ಥೆಯ ಅಣಕ. ಉದ್ಧವ್ ಠಾಕ್ರೆ ಮಹಾರಾಷ್ಟ್ರದ ಮುಖ್ಯಮಂತ್ರಿಯಂತಹ ಜವಾಬ್ದಾರಿ ಸ್ಥಾನದಲ್ಲಿ ಇರುವವರು ಈ ರೀತಿಯ ಹೇಳಿಕೆ ಕೊಡಬಾರದು. ಇದು ಭಯೋತ್ಪಾಕ ಹೇಳಿಕೆ ಎನಿಸುತ್ತದೆ. ಈ ರೀತಿ ಕುಚೋದ್ಯದ ಹೇಳಿಕೆಗಳಿಗೆ ಪೂರ್ಣ ವಿರಾಮ ಹಾಕಬೇಕು ಎಂದರು.