ಬೊಮ್ಮಾಯಿ ಸರ್ಕಾರಕ್ಕೆ ಕುಮಾರಸ್ವಾಮಿ 1 ತಿಂಗಳ ಡೆಡ್‌ಲೈನ್! ಇಲ್ಲಾಂದ್ರೆ....

ಕೆಲ ದಿನಗಳಿಂದ ಅಶಾಂತಿ ಬೇಗುದಿಯಲ್ಲಿ ಬೇಯುತ್ತಿರುವ ಕರ್ನಾಟಕ ರಾಜ್ಯವು ಒಂದು ತಿಂಗಳ ಒಳಗಾಗಿ ಸಹಜ ಸ್ಥಿತಿಗೆ ಮರಳದೇ ಇದ್ದರೆ ಶಾಂತಿ, ಸಾಮರಸ್ಯ, ಸೌಹಾರ್ದ ಹಾಗೂ ಸಾಮರಸ್ಯ ಕರ್ನಾಟಕದ ಪುನರ್ ಸ್ಥಾಪನೆಗಾಗಿ ರಾಜ್ಯವ್ಯಾಪಿ ಪಾದಯಾತ್ರೆ ಕೈಗೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು, ಮಾ.31: ಕೆಲ ದಿನಗಳಿಂದ ಅಶಾಂತಿ ಬೇಗುದಿಯಲ್ಲಿ ಬೇಯುತ್ತಿರುವ ಕರ್ನಾಟಕ ರಾಜ್ಯವು ಒಂದು ತಿಂಗಳ ಒಳಗಾಗಿ ಸಹಜ ಸ್ಥಿತಿಗೆ ಮರಳದೇ ಇದ್ದರೆ ಶಾಂತಿ, ಸಾಮರಸ್ಯ, ಸೌಹಾರ್ದ ಹಾಗೂ ಸಾಮರಸ್ಯ ಕರ್ನಾಟಕದ ಪುನರ್ ಸ್ಥಾಪನೆಗಾಗಿ ರಾಜ್ಯವ್ಯಾಪಿ ಪಾದಯಾತ್ರೆ ಕೈಗೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

'ಕುಮಾರಸ್ವಾಮಿಯವರಿಗೆ ಒಂದೆರಡಲ್ಲ, ಮೂರು-ಮೂರು ಕಡೆ ಗಂಡಸ್ತನ ತೋರಿಸುವುದು ಗೊತ್ತು'

ಬೆಂಗಳೂರಿನ ಗಾಂಧಿ ಭವನದಲ್ಲಿ ಇಂದು(ಗುರುವಾರ) ಜೆಪಿ ವಿಚಾರ ವೇದಿಕೆ ಹ್ಮಮಿಕೊಂಡಿದ್ದ 'ಸರ್ವ ಜನಾಂಗದ ಶಾಂತಿಯ ತೋಟ - ಕರ್ನಾಟಕ : ಒಂದು ಭಾವೈಕ್ಯ ಚರ್ಚೆ' ಯಲ್ಲಿ ಪಾಲ್ಗೊಂಡು ಅವರು ಮಾತನಾಡಿದ ಅವರು, ಶಾಂತಿ, ಸಹನೆ, ಸೌಹಾರ್ದ, ಸಾಮರಸ್ಯದ ತಾಣವಾಗಿದ್ದ ಕರ್ನಾಟಕವೂ ಈಗ ಹಿಂಸೆ, ಅಸಹನೆ, ಕೋಮು ದ್ವೇಷದ ದಳ್ಳುರಿಯಲ್ಲಿ ಉರಿಯುತ್ತಿದೆ. ಈ ಕಾರಣಕ್ಕಾಗಿಯೇ ನಾನು ಸರಕಾರಕ್ಕೆ ಗಡುವು ಕೊಡುತ್ತಿದ್ದೇನೆ. ಒಂದು ತಿಂಗಳಲ್ಲಿ ಈ ವಾತಾವರಣವನ್ನು ತಿಳಿಗೊಳಿಸದಿದ್ದರೆ ರಾಜ್ಯದ ಉದ್ದಗಲಕ್ಕೂ ಪಾದಯಾತ್ರೆ ಮಾಡಿ ಜನರಲ್ಲಿ ಜಾಗೃತಿ ಮೂಡಿಸುತ್ತೇನೆ. ಅವರನ್ನು ಬಡಿದೆಬ್ಬಿಸುತ್ತೇನೆ. ಸರ್ವ ಜನಾಂಗದ ಶಾಂತಿಯ ತೋಟವನ್ನು ಮತ್ತೆ ಪ್ರತಿಷ್ಠಾಪನೆ ಮಾಡಬೇಕು ಎಂದು ಹೇಳಿದರು.

Related Video